Thursday, September 19, 2024

ಪ್ರಾಯೋಗಿಕ ಆವೃತ್ತಿ

ಜೂನ್ 21 ರಂದು ಯೋಗ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಅಶ್ವತಿ

ಜಿಲ್ಲೆಯಲ್ಲಿ ಜೂನ್21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಯುತವಾಗಿ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆಯನ್ನು ಮಾಡಿಕೊಳ್ಳಿ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷೆತೆ ವಹಿಸಿ ಅವರು ಮಾತನಾಡಿದರು. ಜೂನ್21 ರಂದು ಬೆಳಿಗ್ಗೆ 07 ಗಂಟೆಯಿಂದ ಜಿಲ್ಲಾ ಮಟ್ಟದ ಯೋಗ ಕಾರ್ಯಕ್ರಮ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ಆವರಣದಲ್ಲಿ 45 ನಿಮಿಷಗಳ ಕಾಲ ಕ್ರಿಯಾತ್ಮಕ ಯೋಗಾಭ್ಯಾಸ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು.

ಯೋಗದಿನಾಚರಣೆಯಲ್ಲಿ ಭಾಗವಹಿಸುವಂತಹ ಎಲ್ಲಾ ಯೋಗಪಟುಗಳಿಗೆ ಯೋಗ ಮಾಡಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಿ ಹಾಗೂ ಪಾರ್ಕಿಂಗ್ ವ್ಯವಸ್ಥೆ, ಉಪಹಾರದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಿ ಎಂದರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜೂನ್18 ರಂದು ಯೋಗ ಪಟುಗಳ ಸಮುಖದಲ್ಲಿ ಪೂರ್ವಾಬ್ಯಾಸ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಜಾಥಾ (ಯೋಗನಡಿಗೆ)ಕಾರ್ಯಕ್ರಮವನ್ನು ನಡೆಯುತ್ತದೆ ಎಂದರು.

ಯೋಗ ಸಂಸ್ಥೆಗಳು, ಆಯುಷ್ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಚಾಲಕರು ಜಿಲ್ಲಾ ಎನ್.ಎಸ್.ಎಸ್ ಹಾಗೂ ಎನ್ ಸಿ.ಸಿ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ,ಶಾಲಾ ಕಾಲೇಜು ವಿದ್ಯಾರ್ಥಿಗಳು, ಸೇರಿದಂತೆ ಯೋಗ ತರಬೇತುದಾರರು ಇತರು ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಆಯುರ್ವೇದ ವೈದ್ಯಾಧಿಕಾರಿ ಡಾ.ಪುಷ್ಪಾ, ರೆಡ್ ಕ್ರಾಸ್ ಉಪಾಧ್ಯಕ್ಷರು ಮೀರಾ ಶಿವಲಿಂಗಯ್ಯ, ಯೋಗ ಶಿಕ್ಷಕರುಗಳಾದ ಶಿವರುದ್ರಸ್ವಾಮಿ, ಶಾಂತ ನಾರಾಯಣ ಶಾಸ್ತ್ರಿ, ಸಾವಿತ್ರಿ, ಸರಸನಂದನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!