ರಾಜ್ಯ ಬಜೆಟ್ ಅನ್ನು ಇಂದು ಮಂಡಿಸಿರುವ ಮುಖ್ಯಮಂತ್ರಿ ಹಾಗೂ ರಾಜ್ಯ ಹಣಕಾಸು ಸಚಿವರೂ ಆದ ಸಿ.ಎಂ. ಸಿದ್ದರಾಮಯ್ಯ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಅದಕ್ಕೆ ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆಯನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ನಿರ್ವಹಿಸುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ 10 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.




