Friday, October 11, 2024

ಪ್ರಾಯೋಗಿಕ ಆವೃತ್ತಿ

ಬಸವೇಶ್ವರ ಜಯಂತಿ ಯಶಸ್ವಿಗೆ ಮನವಿ

ಮಹಾಮಾನವತಾವಾದಿ, ವಿಶ್ವಗುರು ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಯಶಸ್ವಿಗೊಳಿಸಬೇಕೆಂದು ಮಂಡ್ಯ ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷ ಎಂ.ಬಿ. ರಾಜಶೇಖರ್ ಮನವಿ ಮಾಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಬಸವ ಸಮಿತಿ ಸಹಯೋಗದೊಂದಿಗೆ ಮೇ.3ರಂದು ವಿಶ್ವಗುರು ಜಗಜ್ಯೋತಿ ಬಸವೇಶ್ವರ ಜಯಂತಿ ನಡೆಯಲಿದೆ‌ ನಾಳೆ ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದವರೆಗೆ ಬಸವೇಶ್ವರರ ಹಾಗೂ 12ನೇ ಶತಮಾನದ ಶರಣರ ಭಾವಚಿತ್ರಗಳ ಭವ್ಯ ಮೆರವಣಿಗೆ ನಡೆಯಲಿದೆ ಎಂದರು.

11ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ ವಹಿಸಲಿದ್ದಾರೆ.

ಅಬಕಾರಿ ಸಚಿವ ಕೆ. ಗೋಪಾಲಯ್ಯ ಉದ್ಘಾಟನೆ ಮಾಡಲಿದ್ದು ರೇಷ್ಮೆ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡರ ಘನ ಉಪಸ್ಥಿತಿ ಇರಲಿದೆ.ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್,ಶಾಸಕರಾದ ಡಿ.ಸಿ.ತಮ್ಮಣ್ಣ, ಸಿ.ಎಸ್. ಪುಟ್ಟರಾಜು,ಸುರೇಶ್ ಗೌಡ ಅನ್ನದಾನಿ,ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು ಪಾಲ್ಗೊಳ್ಳಲಿದ್ದಾರೆ.

ಮೈಸೂರಿನ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ಜ್ಯೋತಿ ಶಂಕರ್ ಪ್ರವಚನ ನೀಡಲಿದ್ದಾರೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಎಸ್.ಶಿವಪ್ರಕಾಶ್,ಷಡಕ್ಷರಿ,ಕೆಂಪಣ್ಣ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!