Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಮಾಡಲಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀರಂಗಪಟ್ಟಣದ ಹನುಮಂತಯ್ಯರವರನ್ನು ಅವರ ಸ್ವಗೃಹದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ಮೂಲಕ ಬ್ರಿಟಿಷರ ಆಡಳಿತ ಅಂತ್ಯಗೊಳಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ನಮಗೆ ಮಾದರಿಯಾಗಿದೆ.ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲು ಬಹಳ ಬಸಂತೋಷವಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!