ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಮುತ್ತೇಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದೇಗೌಡಕೊಪ್ಪಲು, ನಂದಹಳ್ಳಿ, ಬುಂಡಾರೆಕೊಪ್ಪಲು, ಎಂ.ಹಟ್ನ,ಹನಗನಹಳ್ಳಿ, ಕಾಲೋನಿ, ಹೊಸಕೊಪ್ಪಲು, ಮುತ್ತೇಗೆರೆ ಗ್ರಾಮದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ಹಾಗೂ ಮನ್ಮುಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರು ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳು ಸಹ ಉತ್ತಮವಾದ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬುದು ನನ್ನ ಆಸೆ. ಈ ನಿಟ್ಟಿನಲ್ಲಿ ನಾನು ಕೂಡ ಶಾಲಾ ಮಕ್ಕಳಿಗೆ ಅನುಕೂಲವಾಗಲೆಂದು ನಮ್ಮ ಟ್ರಸ್ಟ್ ವತಿಯಿಂದ ಬ್ಯಾಗ್ ಗಳನ್ನು ಹಂಚಿಕೆ ಮಾಡಿದ್ದೇನೆ.ಮಕ್ಕಳು ಶ್ರದ್ಧೆಯಿಂದ ಶಿಕ್ಷಣದತ್ತ ಗಮನ ಹರಿಸಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಬೇಕು ಎಂದು ಸಲಹೆ ನೀಡಿದರು.
ಶಂಭು ಸೇವಾ ಟ್ರಸ್ಟ್ ನ ಬಿ.ಆರ್ ಸುರೇಶ್, ಪುಟ್ಟಸ್ವಾಮಿ, ಬಾಲರಾಜು, ಮಾಸ್ತಿಗೌಡ, ಚೆನ್ನಕೇಶವ ಹಾಗೂ ಗ್ರಾಮದ ಮುಖಂಡರು,ಯುವಕರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.