Friday, November 20, 2026

ಪ್ರಾಯೋಗಿಕ ಆವೃತ್ತಿ

ಮಹಾಕುಂಭಮೇಳ ಪ್ರಚಾರ ವಾಹನಕ್ಕೆ ಚಾಲನೆ


  • ಜಿಲ್ಲೆಯ ವಿವಿಧೆಡೆ ಸಂಚರಿಸಲಿರುವ ವಾಹನ

  • ದಾನಿಗಳ ಕೊಡುಗೆ ಸ್ವೀಕಾರಕ್ಕೆ ಪ್ರತ್ಯೇಕ ವಾಹನ

ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳ ಕಾರ್ಯಕ್ರಮದ ಹಿನ್ನಲೆಯಲ್ಲಿ ಪ್ರಚಾರ ವಾಹನ ಹಾಗೂ ದಾನಿಗಳ ಕೊಡುಗೆ ಸ್ವೀಕಾರ ವಾಹನಕ್ಕೆ ಗಣ್ಯರು ಚಾಲನೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು.

ಮಹಾಕುಂಭಮೇಳ ಕಾರ್ಯಕ್ರಮದ ಪ್ರಚಾರವಾಹನ ಹಾಗೂ ದಾನಿಗಳ ಕೊಡುಗೆ ಸ್ವೀಕಾರದ ಮೊದಲನೇ ವಾಹನವು ಸೆ.27,28,29ರಂದು ನಾಗಮಂಗಲ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸಲಿವೆ.

ಸೆ.30 ಹಾಗೂ ಅ.1 ಮತ್ತು 2 ರಂದು ಮದ್ದೂರು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸಲಿದ್ದು, ಅ.3 ಮತ್ತು 4 ರಂದು ಮಳವಳ್ಳಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.5 ಮತ್ತು 6 ರಂದು ಮಂಡ್ಯ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸಲಿವೆ.

ಅ.7ಮತ್ತು 8 ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.9 ಮತ್ತು 10 ರಂದು ಪಾಂಡವಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ದಾನಿಗಳ ಕೊಡುಗೆ ಸ್ವೀಕಾರ ವಾಹನವು ಸಂಚರಿಸುವುದು. ಮಹಾಕುಂಭಮೇಳ ಕಾರ್ಯಕ್ರಮದ ಎರಡನೇ ಪ್ರಚಾರದ ವಾಹನವು ಸೆ.28,29ರಂದು ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.

ಸೆ.30, ಹಾಗೂ ಅ.1 ಮತ್ತು 2 ರಂದು ಬೂಕನಕೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ, ಅ.3 ಮತ್ತು 4 ರಂದು ಶೀಳನೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.5 ಮತ್ತು 6 ರಂದು ಸಂತೇಬಾಚಹಳ್ಳಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.

ಅ.7ಮತ್ತು 8 ರಂದು ಅಕ್ಕಿಹೆಬ್ಬಾಳು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.9 ಮತ್ತು 10 ರಂದು ಕಸಬಾ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಕೆ.ಆರ್ ಪೇಟೆ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ದಾನಿಗಳ ಕೊಡುಗೆ ಸ್ವೀಕಾರ ವಾಹನವು ಸಂಚರಿಸುವುದು.

ಕುಂಭಮೇಳ ಪ್ರಚಾರ ವಾಹನ ಚಾಲನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಂದಾಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ