Friday, November 20, 2026

ಪ್ರಾಯೋಗಿಕ ಆವೃತ್ತಿ

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ದಿನೇಶ್ ಗೂಳಿಗೌಡ ಮನವಿ

ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರದಿಂದ ನೀಡಬೇಕಾಗಿರುವ ಪ್ರೋತ್ಸಾಹ ಧನ ಶೀಘ್ರವಾಗಿ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದು ಮನವಿ ಮಾಡಿರುವ ಅವರು, ಮಂಡ್ಯ ಜಿಲ್ಲೆಯಲ್ಲಿ ಒಟ್ಟು 1,272 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 1,02,000 ರೈತ ಕುಟುಂಬಗಳು ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿವೆ.

ಈ ಹೈನುಗಾರಿಕೆ ಕುಟುಂಬಗಳು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್)ಕ್ಕೆ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಎರಡು ಸಮಯಗಳಲ್ಲೂ ಒಟ್ಟು 8.50 ಲಕ್ಷ ಲೀಟರ್ ಹಾಲು ಹಾಕುತ್ತಿದ್ದಾರೆ.

ಪ್ರತಿ ದಿನ 8.50 ಲಕ್ಷ ಹಾಲಿಗೆ ಬರಬೇಕಾಗಿರುವ ಮೊತ್ತ ರೂ.42.50 ಲಕ್ಷಗಳಾಗಿದ್ದು, ತಿಂಗಳಿಗೆ ಸುಮಾರು ರೂ.12.50 ಕೋಟಿ ರೂ. ಬರಬೇಕಾಗಿರುತ್ತದೆ. ಪ್ರಸ್ತುತ ಆಗಸ್ಟ್ ಮಾಹೆಯಿಂದ ಇದುವರೆವಿಗೂ ಬಾಕಿಯಿರುವ ಒಟ್ಟು ಮೊತ್ತ ಸುಮಾರು ರೂ.50 ಕೋಟಿಗಳಾಗಿದ್ದು, ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತ ಕುಟುಂಬಗಳಿಗೆ ಸರ್ಕಾರ ಆಗಸ್ಟ್ ಮಾಹೆಯಿಂದ ಇದುವರೆವಿಗೂ ಪ್ರೋತ್ಸಾಹ ಧನ ನೀಡಿಲ್ಲ.

ಇದರಿಂದಾಗಿ ಈ ಕುಟುಂಬಗಳು ತೀವ್ರ ಸಂಕಷ್ಟದಲ್ಲಿದ್ದು, ಕೂಡಲೇ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕೆಂದು ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರಿಗೆ ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ