Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತರಿಂದ ಖರೀದಿಸುವ ಹಾಲಿಗೆ 1 ರೂ. ದರ ಹೆಚ್ಚಳ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಹಾಲಿಗೆ 1 ರೂ. ದರ ಹೆಚ್ಚಳ ಮಾಡಿದೆ.

ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ 29.15 ರೂ. ನೀಡುತ್ತಿದ್ದು, ಇದರ ಬೆಲೆಯನ್ನು 30.15 ರೂ.ಗೆ ಹೆಚ್ಚಿಸಲು ಇತ್ತಿಚೇಗೆ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನವೆಂಬರ್ 1 ರಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.

ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿ ಲೀಟರ್ ಹಾಲನ್ನು 28.25 ರೂ.ಗೆ ಖರೀದಿಸುತ್ತಿದ್ದು, ಇದರ ದರವನ್ನು ಒಂದು 1 ಹೆಚ್ಚಿಸಿ, ಇನ್ನೂ ಮುಂದೆ 29.25 ರೂ.ಗೆ ಖರೀದಿ ಮಾಡಲಾಗುವುದು. ಒಕ್ಕೂಟದ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸರಾಸರಿ 9.84 ಲಕ್ಷ ಲೀಟರ್ ಹಾಲನ್ನು ಶೇಖರಿಸಲಾಗುತ್ತಿದೆ. ಪ್ರಸ್ತುತ ಮಳೆಯಿಂದಾಗಿ ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಶೇಖರಣಿ ಪ್ರಮಾಣದಲ್ಲಿ ಕಡಿಮೆ ಆಗುತ್ತಿದೆ, ಇತ್ತೀಚಿನ ದಿನಗಳಲ್ಲಿ ಹಸಿರು ಮೇವಿನ ಕೊರತೆ ಹಾಗೂ ಇತರೆ ಕಾರಣಗಳಿಂದ ಹಾಲು ಉತ್ಪಾದನಾ ವೆಚ್ಚ ಅಧಿಕವಾಗಿದೆ.

ಒಕ್ಕೂಟದ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗಿದ್ದು, ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವ ಅಗತ್ಯತೆಯನ್ನು ಮನಗಂಡು ಈ ದರ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರವು ನ.1,2022 ರಿಂದ ಮಾ.31,2013ರವರೆಗೆ ಜಾರಿಯಲ್ಲಿರಲಿದೆ ಎಂದು ಒಕ್ಕೂಟ ತಿಳಿಸಿದೆ.

ಪಶು ಆಹಾರದ ಬೆಲೆ ಏರಿಕೆ 

ಇದೇ ಸಂದರ್ಭದಲ್ಲಿ ಒಕ್ಕೂಟವು ಪಶು ಆಹಾರದ ಬೆಲೆಯನ್ನು ಹೆಚ್ಚಳ ಮಾಡಿದೆ.

1,040 ರೂ. ಇದ್ದ 50 ಕೆ.ಜಿ. ತೂಕದ ನಂದಿನಿ ಗೋಲ್ಡ್ ಪಶು ಆಹಾರದ ಬೆಲೆಯನ್ನು 1,165 ರೂ.ಗೆ, ಹಾಗೇಯೆ 1,160 ರೂ. ಇದ್ದ ನಂದಿನಿ ಬೈಪಾಸ್ ಪಶು ಆಹಾರದ ಬೆಲೆಯನ್ನು 1,285 ರೂ.ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ದರಗಳು ಸೆ.19ರಿಂದಲೇ ಜಾರಿಗೆ ಬಂದಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!