Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳೆ ಹಾನಿಗೊಳಗಾದ 210 ಮನೆಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ

ಮನೆ ಹಾನಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯಲ್ಲಿ ಇನ್ನೂ 571 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 361 ಮನೆಗಳ ಪರಿಹಾರ ಪಾವತಿ ಮಾಡಲಾಗಿದೆ. ಉಳಿದ 210 ಮನೆಗಳ ಪರಿಹಾರ ಪಾವತಿ ಬಾಕಿ ಇದೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು, ಉಳಿದವರಿಗೆ ಪರಿಹಾರ ಪಾವತಿ ಮಾಡಲು ತಾಲ್ಲೂಕುಗಳಲ್ಲಿ ಬೇಕಿರುವ ಅನುದಾನದ ವರದಿ ಪಡೆದು ಬಿಡುಗಡೆ ಮಾಡಲಾಗುವುದು. ಪರಿಹಾರ ಹಣವನ್ನು ಶೀಘ್ರವಾಗಿ ಪಾವತಿ ಮಾಡಿ ಸೂಚಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಮಳೆಯಿಂದ ಹಾನಿಯಾಗಿರುವ 260 ಶಾಲೆಗಳ ಪೈಕಿ 233 ಶಾಲೆಗಳ ದುರಸ್ತಿ ಕಾಮಗಾರಿಗಳಿಗೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ 466 ಲಕ್ಷ ರೂ.ಹಾಗೂ 36 ಆಸ್ಪತ್ರೆಗಳ ಪೈಕಿ 25 ಆಸ್ಪತ್ರೆಗಳ ದುರಸ್ತಿಗೆ 50 ಲಕ್ಷಗಳ ಅನುಮೋದನೆ ನೀಡಲಾಗಿದೆ. ಕಾಮಗಾರಿ ಅನುಷ್ಠಾನ ಮಾಡುವ ಇಲಾಖೆ, ಸಂಸ್ಥೆಗಳು ಕಾಮಗಾರಿಗಳನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದರು.

ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ಹಾಳಾಗಿರುವ ರಸ್ತೆ, ಸೇತುವೆ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗಳನ್ನು ಶೀಘ್ರವಾಗಿ ಪ್ರಾರಂಭಿಸಿ ವರದಿ ನೀಡಿ, ರಸ್ತೆ, ಸೇತುವೆ, ಪೈಪ್ ಲೈನ್, ಕೆರೆ ಮುಂತಾದ ಸ್ಥಳಗಳಲ್ಲಿ ತಾತ್ಕಾಲಿಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಶಾಶ್ವತ ಕಾಮಗಾರಿ ಕೈಗೊಳ್ಳಲು ಸರ್ಕಾರ ಅಥವಾ ಕೇಂದ್ರ ಕಚೇರಿಗೆ ಬರೆದಿರುವ ಪತ್ರಗಳ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಗಮನಕ್ಕೆ ತರುವಂತೆ ತಿಳಿಸಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ದುರಸ್ತಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜು ರೂ 91.70 ಲಕ್ಷಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿದರು.

ಸಬೆಯಲ್ಲಿ ಜಿ.ಪಂ.ಸಿಇಓ ಶಾಂತ ಎಲ್.ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿ ಕೀರ್ತನಾ, ಅಕ್ರಮ್ ಷಾ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಸ್ವಾಮಿ ಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!