ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡುವಿನಕೋಡಿ ಗ್ರಾಮದಲ್ಲಿ 80ಕ್ಕೂ ಹೆಚ್ಚು ತೆಂಗಿನ ಮರಗಳು ಉರುಳಿ ಬಿದ್ದು ಹಾನಿಯಾಗಿರುವ ಬಗ್ಗೆ ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.
ಅಕ್ಕಿಹೆಬ್ಬಾಳು ಗ್ರಾಮದಲ್ಲಿ 2 ಮನೆಗಳಿಗೆ ಹಾನಿಯಾಗಿದ್ದು ನಿಯಮಾನುಸಾರ ಪರಿಶೀಲನೆ ನಡೆಸಿ ಪರಿಹಾರ ನೀಡುವಂತೆ ತಹಶೀಲ್ದಾರ್ ಅವರಿಗೆ ಮಾರ್ಗದರ್ಶನ ನೀಡಿದರು. ಗ್ರಾಮಸ್ಥರು ಹಾನಿಗೆ ಒಳಗಾಗಿರುವ ತೆಂಗಿನ ಮರಗಳಿಗೆ ಸಮರ್ಪಕ ಪರಿಹಾರ ನೀಡಿ ಆಗಿರುವ ನಷ್ಟವನ್ನು ತುಂಬಿಸಿಕೊಡಬೇಕು.
ಮನೆಗಳಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ವಿ.ರೂಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.