Friday, September 20, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ,
ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಡಿಸೆಂಬರ್ 31ರೊಳಗಾಗಿ ವೆಬ್‍ಸೈಟ್ http://ssp.postmatric.karnataka.gov.in    ಅಥವಾ http://bcwd.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಇ-ಮೇಲ್:  bcwdhelpline @gmail.com , ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ದೂ.ಸಂ. 080-35254757, ಇಮೇಲ್–postmetrichelp@ karnataka.gov.in. ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ.08232 220835 ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!