Friday, November 20, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆ ಪುಸ್ತಕ ವಿತರಣೆ

ಕೋವಿಡ್ ನಿಂದಾಗಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ವಿದ್ಯಾರ್ಥಿಗಳ ಕಲಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಕಲಿಕಾ ಅಂತರವನ್ನು ಸರಿದೂಗಿಸಲು ಅವರಿಗೆ ಇಂದು ಕಲಿಕಾ ಚೇತರಿಕೆ ಪುಸ್ತಕಗಳನ್ನು ವಿತರಿಸಲಾಯಿತು.

ಶ್ರೀರಂಗಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆ ಪುಸ್ತಕಗಳನ್ನು ನೀಡಲಾಯಿತು.

ಸರ್ಕಾರ 2022/23 ನೇ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷ ಎಂದು ಘೋಷಿಸಿದ್ದು, ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ ಕಲಿಕಾ ಕ್ರಮದಲ್ಲಿ ಪ್ರಗತಿ ಸಾಧಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕಲಿಕಾ ಹಾಳೆಗಳನ್ನು ಹೊಂದಿರುವ ಪುಸ್ತಕಗಳನ್ನು ಶ್ರೀರಂಗಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಪ ಪ್ರಾಚಾರ್ಯರ ಕಚೇರಿಯಲ್ಲಿ ಮೊದಲ ಹಂತವಾಗಿ ಗಣಿತ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕೂಡಲಕುಪ್ಪೆ ಸೋಮಶೇಖರ್, ಉಪ ಪ್ರಾಚಾರ್ಯ ಅಶೋಕ್ ಕುಮಾರ್ ಬಿ. ಹಾಗೂ ಶಿಕ್ಷಕರಾದ ಶಶಿಧರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ