Friday, November 20, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ

ಸರ್ಕಾರಿ ಪ್ರೌಢಶಾಲೆ ಬೇಲೂರು, ಮಂಡ್ಯ ತಾಲ್ಲೂಕು ದಕ್ಷಿಣ ವಲಯದಲ್ಲಿ ಇಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮವನ್ನು ಡಾ.ಮಹಮ್ಮದ್ ಸುಹೇಲ್ ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಪ್ರತಿಯೊಂದು ಸೂಕ್ಷ್ಮ ಸಂಗತಿಗಳನ್ನು ಮನಮುಟ್ಟುವಂತೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಮಾನಸಿಕ, ದೈಹಿಕ, ಸಾಮಾಜಿಕ ಭಾವನಾತ್ಮಕವಾಗಿ ಯಾವ ರೀತಿ ಧೃಢತೆಯಿಂದಿರಬೇಕು, ಆರೋಗ್ಯವಂತ ಮಕ್ಕಳ ವರ್ತನೆ ಹೇಗಿರಬೇಕು ಎಂದು ಮಾಹಿತಿ ನೀಡಿ ಅದಕ್ಕೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆಯನ್ನು ಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದರು.

ಕೋವಿಡ್ ನಂತರದ ಕಾಲದಲ್ಲಿ, ವಿದ್ಯಾರ್ಥಿಗಳಿರಬಹುದು, ಪೋಷಕರಾಗಿರಬಹುದು, ಆರೋಗ್ಯ ಕಾರ್ಯಕರ್ತರಾಗಿರಬಹುದು ಎಲ್ಲರಲ್ಲೂ ಮಾನಸಿಕ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಹಲವಾರು ರೀತಿಯ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರವು ಸೂಕ್ತವಾದ ವೇದಿಕೆಯನ್ನು ಸರ್ಕಾರವು ಕಲ್ಪಿಸಿಕೊಡುವುದಕ್ಕೆ ಸರ್ಕಾರ ಪ್ರಯತ್ನ ಮಾಡುತ್ತಿರುವುದರಿಂದ, ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಬೇಗ ಇಂತಹ ಕಾಯಿಲೆಗಳನ್ನು ಗುರುತಿಸುವುದು ಹೇಗೆ, ಅದರಿಂದ ಹೊರ ಬರುವುದು ಹೇಗೆ ಎಂಬುದನ್ನು ತಿಳಿಸಬೇಕಾಗಿದೆ ಎಂದರು.

ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮಾಡಲಾಯಿತು.

ಸ್ನೇಹ (ಪ್ರಥಮ) ಶ್ರೇಯಾ (ದ್ವೀತಿಯ) ಕುಮಾರ್, ಪ್ರಜ್ವಲ್ ಬಿ.ಸಿ ತೃತೀಯ ಸ್ಥಾನಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ ಕೆ.ಎಂ., ದೈಹಿಕ ಶಿಕ್ಷಣ ಶಿಕ್ಷಕಿ ಉಷಾರಾಣಿ, ರೇಣುಕಾ, ಜ್ಯೋತಿ, ಲೋಕೇಶ್, ಸಿದ್ಧರಾಜು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ