ಇತ್ತೀಚೆಗೆ ಮರ ಬಿದ್ದು ಮೃತಪಟ್ಟಿದ್ದ ಸಿದ್ದರಾಜು ನಿವಾಸಕ್ಕೆ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಭೇಟಿ ನೀಡಿ ಆರ್ಥಿಕ ನೆರವು ನೀಡಿ ಸಾಂತ್ವನ ಹೇಳಿದರು.
ಕೆಲ ದಿನಗಳ ಹಿಂದೆ ಕೃಷ್ಣರಾಜಸಾಗರದ ನಿವಾಸಿ ಸಿದ್ದರಾಜು ಹೆಂಡತಿ, ಮಕ್ಕಳ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಗಾಳಿಯ ರಭಸಕ್ಕೆ ತೆಂಗಿನ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಒಂದು ವಾರದ ನಂತರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು.
ಈ ಹಿನ್ನಲೆಯಲ್ಲಿ ಇಂದು ಅವರ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಸಿದ್ದರಾಜು ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೆರವು ನೀಡಿದರು.
ಬಳಿಕ ಅಕಾಲಿಕವಾಗಿ ಸಾವನ್ನಪ್ಪಿದ್ದ ಮಲ್ಲಯ್ಯ ಮನೆಗೂ ಭೇಟಿ ನೀಡಿ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಕಾಶ್, ಸದಸ್ಯ ದೇವು, ಮುಖಂಡರಾದ ಅಶೋಕ್, ಸಂತೋಷ್, ಆನಂದ್, ಜಗದೀಶ್, ನಾರಾಯಣ್ ಇತರರಿದ್ದರು.