ಲೋಕಸಭಾ ಸಂಸದರ ಸ್ಥಳೀಯ ಪ್ರದೇಶಾಭಿೃದ್ಧಿ ನಿಧಿಯಿಂದ ಮಂಡ್ಯ ಜಿಲ್ಲೆಯ 20 ಮಂದಿ ದೈಹಿಕ ವಿಕಲಚೇತನರಿಗೆ ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ, ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ. ಸಿಇಒ ದಿವ್ಯ ಪ್ರಭು, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.