Tuesday, May 14, 2024

ಪ್ರಾಯೋಗಿಕ ಆವೃತ್ತಿ

ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2021 ಜನವರಿ 1 ರಿಂದ 2021ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳು ಆಗಿರಬೇಕು. ಕೃತಿಯಲ್ಲಿ ಪ್ರಥಮ2021 ಎಂದು ಮುದ್ರಿತವಾಗಿರಬೇಕು.

ಈ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟರ್ ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಭವನ ಎರಡನೇ ಮಹಡಿ ಜೆ.ಸಿ ರಸ್ತೆ ಬೆಂಗಳೂರು 560002 ಇವರಿಗೆ ರಿಜಿಸ್ಟರ್ಡ್ ಅಂಚೆ ಕೊರಿಯರ್ ಮೂಲಕ ಅಥವಾ ಖುದ್ದಾಗಿ 2022ರ ಜೂನ್ 15ರೊಳಗೆ ತಲುಪಿಸಬಹುದು. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ದೂ.ಸಂ:080-22211730 ಸಂಪರ್ಕಿಸಬಹುದೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!