ಮೈಸೂರು ರಂಗಾಯಾಣದ ವತಿಯಿಂದ ರಂಗತರಬೇತಿ ಕೋರ್ಸಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿದ್ದು, ವಯೋಮಿತಿ ಅರ್ಜಿ ಸಲ್ಲಿಸಲು ನಿಗಧಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ್ದು ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.3000 ಗಳ ವಿದ್ಯಾರ್ಥಿ ವೇತನ ಹಾಗೂ ಮಾಸಿಕ ರೂ 2000 ಗಳ ಊಟೋಪಚಾರದ ಭತ್ಯೆ ಪಾವತಿಸಲಾಗುವುದು.
ರಂಗಾವಿದ್ಯಾಯಲಕ್ಕೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್ ಸೈಟ್ http://www.rangayana.org/ ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ 200ರೂ ಪ.ಜಾ, ಪ.ವರ್ಗ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ರೂ.150 ಗಳು ಡಿ.ಡಿ.ಯನ್ನು ಉಪ ನಿರ್ದೇಶಕರು ರಂಗಾಯಣ ಕಲಾಮಂದಿರ ಆವರಣ ವಿನೋಬಾ ರಸ್ತೆ ಮೈಸೂರು570005 ಇವರ ಹೆಸರಿನಲ್ಲಿ ಪಡೆದು ರಂಗಾಯಣ ವಿಳಾಸಕ್ಕೆ ಜೂನ್.17 ಸಂಜೆ 5:30 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಖುದ್ದಾಗಿ ರಂಗಾಯಣದ ಕಚೇರಿಗೆ ಜೂನ್ 17 ಸಂಜೆ 5:30 ಗಂಟೆಯೊಳಗೆ ತಲುಪಿಸುವುದು ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ ದೂ.ಸಂ.0821-2512639 ಅಥವಾ 9448938661 ಸಂಪರ್ಕಿಸಬಹುದೆಂದು ರಂಗಾಯಣ ಮೈಸೂರು ನಿರ್ದೇಶಕರು ಅಡ್ಡಂಡ ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.