Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆ ಜಾರಿಗೆ : ಸಚಿವ ಚಲುವರಾಯಸ್ವಾಮಿ

ಕಾಂಗ್ರೆಸ್ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಮದ್ದೂರು ತಾಲೂಕಿನ ಕೊಪ್ಪದ ಗ್ರಾಪಂ ಕಚೇರಿ ಆವರಣದಲ್ಲಿ ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ಸ್ವಸಹಾಯ ಗುಂಪುಗಳಿಗೆ ಶುಕ್ರವಾರ ಮಂಜೂರಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಮಹಿಳೆಯರ ಅಭ್ಯುದಯಕ್ಕಾಗಿ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಭಾಗ್ಯ ಜ್ಯೋತಿ ಸೇರಿದಂತೆ ಇತರೆ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಜಾರಿಗೆ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ‌ಧ ಕೊಪ್ಪಳ ಭಾಗದ 46 ಶ್ರೀ ಶಕ್ತಿ ಸ್ವಸಹಾಯ ಗುಂಪುಗಳಿಗೆ ಬಡ್ಡಿರಹಿತ 3.50 ರೂ. ಸಾಲ ನೀಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದು, 2 ಲಕ್ಷ ರೂಪಾಯಿ ಇದ್ದ ಸಾಲವನ್ನು ಕಾಂಗ್ರೆಸ್ ಸರ್ಕಾರ 5 ಲಕ್ಷ ರೂಪಾಯಿ ವರೆಗೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಅನುಕೂಲ ಕಲ್ಪಿಸಿದ್ದು, ಈ ಹಣಕ್ಕೆ ಪ್ರತಿವರ್ಷ 194 ಕೋಟಿಗಳ ಬಡ್ಡಿಯನ್ನು ಸರ್ಕಾರವೇ ಕಟ್ಟುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರಲಿದ್ದು, ರಾಜ್ಯದ ಜನರು ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಎಸ್.ಎಂ.ಕೃಷ್ಣ ಅವರು ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸ್ತ್ರೀ ಶಕ್ತಿ ಸ್ಚ ಸಹಾಯ ಸಂಘಗಳನ್ನು ಜಾರಿಗೆ ತಂದು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ಅನುಕೂಲ ಕಲ್ಪಿಸಿದ್ದರು ಎಂದು ಎಸ್.ಎಂ‌.ಕೃಷ್ಣ ಅವರ ಬಗ್ಗೆ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಸರ್ಕಾರದ ಗಮನಕ್ಕೆ ತಂದು ಜಿಲ್ಲೆಯಲ್ಲಿ ಮಹಿಳೆಯರು ಉತ್ಪಾದಿಸಿದ ವಸ್ತುಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಯನ್ನು ನಿರ್ಮಾಣ ಮಾಡಲಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿವಹಿಸಿ ಮಾತನಾಡಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ಸಂದರ್ಶ ದಿನೇಶ್, ಸಿಇಒ ವನಜಾಕ್ಷಿ, ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್, ಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!