Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಒಳಮೀಸಲಾತಿ ಜಾರಿಗೊಳಿಸಲು ಡಾ.ಬಾಬುಜಗಜೀವನರಾಂ ಸಂಘಗಳ ಒಕ್ಕೂಟದ ಒತ್ತಾಯ

ಸುಪ್ರೀಂ ಕೋರ್ಟ್ ನ ಏಳು ಸದಸ್ಯರ ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಿರುವಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೆ ಆಯಾಯ ರಾಜ್ಯಗಳಿಗೆ ಅಧಿಕಾರವಿದ್ದು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ ದಲಿತರಲ್ಲೇ ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಒದಗಿಸುವಂತೆ ಡಾ.ಬಾಬುಜಗಜೀವನರಾಂ ಸಂಘಗಳ ಒಕ್ಕೂಟವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಮಂಡ್ಯನಗರದ ಪ್ರವಾಸಿ ಮಂದಿರದಲ್ಲಿ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎನ್ ಆರ್ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಜಿಜಿಲ್ಲಾಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ, ಕರ್ನಾಟಕ ಸರ್ಕಾರವು ಕೆನೆಪದರವನ್ನು ಕೈಬಿಟ್ಟು, ವಿಳಂಬ ಮಾಡದೇ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕೆಂದು ನಿರ್ಣಯ ಕೈಗೊಳ್ಳಲಾಯಿತು. ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ಮಾಡಿದ್ದೇವೆ, ಆದರೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತಂತೆ ತೀರ್ಪು ನೀಡಿರುವುದು ಹರ್ಷ ತಂದಿದೆ ಎಂದು ಚಂದ್ರಶೇಖರ್ ತಿಳಿಸಿದರು.

ಅಲ್ಲದೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಸದ್ಯದಲ್ಲೇ ಮಂಡ್ಯ ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಗಹಾಗೂ ಮಂಡ್ಯ ಜಿಲ್ಲಾ ಮಟ್ಟದ ಡಾ. ಬಾಬುಜಗಜೀವನರಾಮ್ ಭವನ ಕಾಮಗಾರಿಗೆ ಕೂಡಲೇ ಜಿಲ್ಲಾಡಳಿತ ಚಾಲನೆ ನೀಡಬೇಕೆಂದು ಒತ್ತಾಯಿಸಲಾಯಿತು.

ಇದೇ ಸಂದರ್ಭದಲ್ಲಿ ಒಕ್ಕೂಟದ  ಜಿಲ್ಲಾಧ್ಯಕ್ಷ ಎನ್.ಆರ್.ಚಂದ್ರಶೇಖರ್ ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಲಾಯಿತು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳಾದ ಎಂ ಪಿ ಚಂದ್ರಶೇಖರ್, ವೈ ಜೆ ಸ್ವಾಮಿ, ಎಂ ಎನ್ ಪ್ರಸನ್ನ, ಶಂಭು, ಕೊಡಿಯಾಲ ಶಂಕರ್, ಕುಮಾರ್, ಮಳವಳ್ಳಿ ಸತೀಶ್, ಕುಮಾರ್, ಬಾಳೆಹೊನ್ನಿಗ ಕುಮಾರ್, ಎನ್.ಶೇಖರ್,  ಮಂಜುನಾಥ, ಅಪ್ಪಾಜಿ ಹಾಗೂ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!