Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಪಾಸ್ ಪೋರ್ಟ್ ಕೇಂದ್ರ ಸ್ಥಾಪಿಸಲು ಒತ್ತಾಯ

ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಪಾಸ್ ಪೋರ್ಟ್ ಕೇಂದ್ರವನ್ನು ಸ್ಥಾಪಿಸಬೇಕೆಂದು ಮೈ ಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ. ವೇಣುಗೋಪಾಲ್ ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ  ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಸ್ ಪೋರ್ಟ್ ಕೇಂದ್ರವನ್ನು ಮಂಡ್ಯ ಜಿಲ್ಲೆಗೆ ತಂದಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಆದರೆ ಈ ಕಚೇರಿ ಸಹಜವಾಗಿ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸುವುದು ಸೂಕ್ತವಾಗಿದೆ .ಆದ್ದರಿಂದ ಈ ಕೇಂದ್ರವನ್ನು ಜಿಲ್ಲಾ ಕೇಂದ್ರದಲ್ಲಿಯೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಮದ್ದೂರಿನಲ್ಲಿ ಪಾಸ್ ಪೋರ್ಟ್ ಕೇಂದ್ರವನ್ನು ಸ್ಥಾಪಿಸುವುದರಿಂದ ಇತರೆ ತಾಲೂಕುಗಳಿಂದ ಸಾರ್ವಜನಿಕರು ಅಲ್ಲಿಗೆ ಹೋಗಲು ಸಾರಿಗೆ ಸೌಲಭ್ಯಗಳಿಲ್ಲ .ಬೇರೆ ತಾಲೂಕುಗಳಿಂದ ಮದ್ದೂರು ತಾಲೂಕಿಗೆ ನೇರವಾದ ಸಾರಿಗೆ ಸಂಪರ್ಕದ ಕೊರತೆ ಇದೆ. ಆದರೆ ಜಿಲ್ಲಾ ಕೇಂದ್ರಕ್ಕೆ ನೇರ ಸಾರಿಗೆ ಸಂಪರ್ಕ ಇರುವುದರಿಂದ ಇಲ್ಲಿಯೇ ಪಾಸ್ಪೋರ್ಟ್ ಕಚೇರಿಯನ್ನು ಸ್ಥಾಪಿಸಬೇಕು ಎಂದರು .

ಮಂಡ್ಯ ನಗರದಲ್ಲಿ ಆಡಳಿತಾತ್ಮಕ ಮತ್ತು ಸೇವಾ ವಲಯಕ್ಕೆ ಸಂಬಂಧಿಸಿದಂತೆ ಪ್ರಧಾನ ಕಚೇರಿಗಳು ಇವೆ .ಆದ್ದರಿಂದ ನಾಗರಿಕರಿಗೆ ಸೌಲಭ್ಯಗಳು ಸಿಕ್ಕುತ್ತದೆ. ಹಾಗಾಗಿ ಸಾರ್ವಜನಿಕರ ಹಿತಾಸಕ್ತಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಕಚೇರಿಯನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್ ಕೃಷ್ಣ, ಗ್ರಾಮೀಣ ಕನ್ನಡಿಗರ ಸಂಘಟನೆ ಮುಖಂಡ ಅಭಿ ಗೌಡ, ಜೈ ಕರ್ನಾಟಕ ಪರಿಷತ್ತಿನ ಎಸ್ ಪಿ ನಾರಾಯಣಸ್ವಾಮಿ, ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಿವಳ್ಳಿ ಚಂದ್ರಶೇಖರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!