Thursday, November 19, 2026

ಪ್ರಾಯೋಗಿಕ ಆವೃತ್ತಿ

ಭಾಗ್ಯಜ್ಯೋತಿ – ಕುಟೀರ ಜ್ಯೋತಿ ವಿದ್ಯುತ್ ಬಿಲ್ ಬಾಕಿ ಮನ್ನಾಕ್ಕೆ ಒತ್ತಾಯ

ಕಡುಬಡವರ ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ವಿದ್ಯುತ್ ಬಿಲ್ ಬಾಕಿಯನ್ನು ಸರ್ಕಾರ ಮನ್ನಾ ಮಾಡಬೇಕೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾರ್ಯದರ್ಶಿ ಕೆ.ಕಬ್ಬಾಳಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ ಬಿಲ್ ಕಟ್ಟಲಾರದೇ ಬಾಕಿ ಉಳಿಸಿಕೊಂಡಿರುವ ಬಡ ಫಲಾನುಭವಿಗಳ ವಿದ್ಯುತ್‌ ಬಿಲ್‌ ಹಣವನ್ನು ಮನ್ನಾ ಮಾಡಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಅನುಕೂಲ ಮಾಡಿಕೊಡುವಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಒತ್ತಾಯಿಸಲಾಗಿದೆ ಎಂದರು.

ಈ ಹಿಂದೆ 2013-18ರ ಅವಧಿಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ ವಿದ್ಯುತ್‌ ಬಿಲ್ಲನ್ನು ಮನ್ನಾ ಮಾಡಿದ್ದರು. ಆದರೆ ನಂತರ ಬಂದ ಬಿಜೆಪಿ ಸರ್ಕಾರ ದುಬಾರಿ ವಿದ್ಯುತ್ ಬಿಲ್ಲನ್ನು ನೀಡಿ ಬಡವರನ್ನು ವಂಚಿಸಿದೆ, ಬಿಲ್ ಕಟ್ಟದ ಕಾರಣದಿಂದ ಎಷ್ಟೋ ಮನೆಗಳ ವಿದ್ಯುತ್ ಸಂಪರ್ಕಗಳನ್ನು ಕಡಿತ ಮಾಡಲಾಗಿದೆ. ಆದ್ದರಿಂದ ಇಂತಹರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ವಿದ್ಯುತ್ ಬಿಲ್ ಬಾಕಿ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಚಾಲ್ತಿಯಲ್ಲಿರುವ ಬಿಲ್ಲನ್ನು ಪಾವತಿ ಮಾಡಲು ಸಂಬಂಧಿಸಿದಂತೆ ವಿದ್ಯುತ್ ನಿಗಮಗಳು ಒತ್ತಡ ನೀಡುತ್ತಿದ್ದು, ಈಗ ಬಿಲ್‌ ಕಟ್ಟಲಾರದೇ ಗೃಹ ಜ್ಯೋತಿ ಫಲಾನುಭವವನ್ನು ಪಡೆಯಲಾರದೆ ಆತಂತ್ರ ಸ್ಥಿತಿಯಲ್ಲಿ ಕಡು ಬಡವರು ಇರುವುದರಿಂದ ಅಂತಹವರ ಸಂಪೂರ್ಣ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿ ಅವರ ಬದುಕಿಗೆ ದಾರಿ ತೋರಿಸಿ, ಬೆಳಕಾಗಬೇಕೆಂದು ಸರ್ಕಾರವನ್ನು ಮನವಿ ಮಾಡಿದರು.

ಗೋಷ್ಠಿಯಲ್ಲಿ ಪಿಎಲ್’ಡಿ ಬ್ಯಾಂಕ್ ನಿರ್ದೇಶಕ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರಾದ ಬಾಲು, ಶಂಕರ್ ಅಂಕನಾಥಪುರ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ