Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಮೂಲದ ಅರಣ್ಯಾಧಿಕಾರಿ ಮಡಿಕೇರಿಯಲ್ಲಿ ಆತ್ಮಹತ್ಯೆ

ಮಂಡ್ಯ ಮೂಲಕ ಮಹಿಳಾ ಅರಣ್ಯಾಧಿಕಾರಿಯೊಬ್ಬರು ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಮಂಡ್ಯ ಮೂಲದ ರಶ್ಮಿ(27) ಎಂಬುವವರು ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಧಿಕಾರಿ.

ಅರಣ್ಯ ಇಲಾಖೆಯಲ್ಲಿ DRFO ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ, ಕೊಡಗು ಜಿಲ್ಲೆಯ ಮಡಿಕೇರಿಯ ಅರಣ್ಯ ಭವನ ಬಳಿ ಇರೊ ವಸತಿ ಗೃಹ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ಎರಡು ವರ್ಷಗಳಿಂದ ರಶ್ಮಿ ಕೊಡಗಿನಲ್ಲಿ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ