Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಕ್ಕರೆ ಕಾರ್ಖಾನೆಗಳಿಗೆ ತಾಂತ್ರಿಕ ಸಮಿತಿ ರಚಿಸಿ ಜಿಲ್ಲಾಧಿಕಾರಿ ಆದೇಶ


ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಮತ್ತು ಸಕ್ಕರೆ ಇಳುವರಿಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ತಾಂತ್ರಿಕ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯನ್ನು  ಜಿಲ್ಲಾಧಿಕಾರಿ ಡಾ.ಕುಮಾರ ಅವರು ರಚಿಸಿ ಆದೇಶಿಸಿದ್ದಾರೆ.

ಕಳೆದ ಜು.28ರಂದು ನಡೆದ ರೈತ ಕುಂದುಕೊರತೆ ಸಭೆಯಲ್ಲಿ ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸ ಮಾಡಲಾಗುತ್ತಿದೆ, ಉತ್ತಮ ಇಳುವರಿ ಇದ್ದರೂ ಉದ್ದೇಶಪೂರ್ವಕವಾಗಿ ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಈ ಆದೇಶ ಮಾಡಲಾಗಿದೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕರನ್ನು ಸಮಿತಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರು ಸೇರಿದಂತೆ ವಿ.ಸಿ.ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದ ಬೆಲ್ಲದ ಪಾರ್ಕ್ ಮುಖ್ಯಸ್ಥ ಡಾ.ಕೆ.ಕೇಶವಯ್ಯ, ನಿವೃತ್ತ ಪ್ರಾಧ್ಯಾಪಕ ಡಾ.ಸ್ವಾಮಿಗೌಡ ಹಾಗೂ ವಿ.ಸಿ.ಫಾರಂನ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ.ತಿಮ್ಮೇಗೌಡ ಅವರನ್ನು ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.

ಜಾಹೀರಾತು

ಸಮಿತಿ ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ತೂಕದಲ್ಲಿ ಮೋಸ ಮಾಡಲಾಗುತ್ತಿದ್ದೆಯೇ ಹಾಗೂ ಸಕ್ಕರೆ ಇಳುವರಿಯನ್ನು ಉದ್ದೇಶಪೂರ್ವಕವಾಗಿ ಅಂದರೆ ಎಫ್.ಆರ್.ಪಿ ದರವನ್ನು ಕಡಿಮೆಗೆ ನಿಗದಿಪಡಿಸುವ ಉದ್ದೇಶದಿಂದ ಉತ್ತಮ ಇಳುವರಿ ಇದ್ದರೂ ಕಡಿಮೆ ಇಳುವರಿ ತೋರಿಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ 3 ವಾರಗಳೊಳಗೆ ವರದಿ ನೀಡಲು ಸೂಚಿಸಲಾಗಿದೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ