Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಜಾಸೌಧಕ್ಕೆ ಶಿಲಾನ್ಯಾಸ : ನರೇಂದ್ರಸ್ವಾಮಿ

ಡಿ.21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಜಾಸೌಧಕ್ಕೆ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ. ಇದೇ ಸಮಯದಲ್ಲಿ ಸಾಧ್ಯವಾದರೆ ತಾಲೂಕು ಪತ್ರಕರ್ತರ ಸಂಘಕ್ಕೆ ಸರ್ಕಾರದಿಂದ ಮಂಜೂರಾಗಿರುವ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನೂ ನೆರವೇರಿಸಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ. ಎಂ.ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀರಾವರಿಗೆ 800 ಕೋಟಿ ರೂ. ನೀಡಿರುವ ಸಿಎಂ ಅವರಿಂದ ಮಳವಳ್ಳಿಯಲ್ಲಿ ಮುಂದೆ ಬೃಹತ್ ಕಾಠ್ಯಕ್ರಮ ಆಯೋಜಿಸಿ ಹನಿ ಮತ್ತು ತುಂತುರು ನೀರಾವರಿ ಯೋಜನೆಗೆ ಚಾಲನೆ ನೀಡುವುದಾಗಿ ಹೇಳಿದರು.

ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ಹಣ ಪಾವತಿಯಲ್ಲಿ ಸರ್ಕಾರ ಮೊದಲ ಸ್ಥಾನದಲ್ಲಿದ್ದರೂ ಕೇಂದ್ರ ನೀಡಬೇ ಕಾಲಹರಣದ ಮಾಡುತ್ತಿದೆ. ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಮನ್ನಣೆ ನೀಡದೆ ಕಿರುಕುಳ ನೀಡುತ್ತಿದೆ. ಕೇಂದ್ರಸರ್ಕಾರ ಶಿಕ್ಷಣ ವ್ಯವಸ್ಥೆಗೆ ನೀಡಬೇಕಾದ ಹಣವನ್ನೂ ನೀಡದೆ ವಂಚಿಸುತ್ತಿದೆ. ಕೇಂದ್ರದ ಸಹಕಾರದಿಂದ ಶೈಕ್ಷಣಿಕವಾಗಿ ಎಷ್ಟು ಉನ್ನತ ಸಂಸ್ಥೆಗಳು ರಾಜ್ಯದಲ್ಲಿ ಸ್ಥಾಪನೆಯಾಗಿವೆ. ನಮ್ಮ ರಾಜ್ಯಕ್ಕೆ ಕೇಂದ್ರದ ಕೊಡುಗೆ ಏನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ಮಾತನಾಡುವಾಗ ವಿವೇಚನೆಯಿಂದ ಮಾತನಾಡಬೇಕು. ಇಲ್ಲಿ ಯಾರೂ ದಡ್ಡರಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ಕೈಗಾರಿಕೆ ಸ್ಥಾಪನೆ ಬಗ್ಗೆ ಸರ್ಕಾರದ ಮುಂದೆಯಾಗಲೀ ಅಥವಾ ಜಿಲ್ಲಾಡಳಿತದ ಮುಂದೆಯಾಗಲಿ ಒಂದೇ ಒಂದು ಪ್ರಸ್ತಾವನೆಯನ್ನು ಇಟ್ಟಿಲ್ಲ. ರಾಜ್ಯಸರ್ಕಾರ ಜಾಗ ಕೊಡುತ್ತಿಲ್ಲ, ಸಹಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಕೈಗಾರಿಕೆಯನ್ನು ಜಿಲ್ಲೆಗೆ ತರಲಾಗದಿರುವ ತಮ್ಮ ದೌರ್ಬಲ್ಯವನ್ನು ಸರ್ಕಾರವನ್ನು ಟೀಕಿಸುವ ಮೂಲಕ ತೋರ್ಪಡಿಸುತ್ತಿದ್ದಾರೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ