Friday, October 18, 2024

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣ| ಕವಣಾಪುರದಲ್ಲಿ ಉಚಿತ ಸಾಮೂಹಿಕ ವಿವಾಹ

ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ ಸಂಘಟನೆಗಳ ಒಕ್ಕೂಟ, ಕವಣಾಪುರ ಹಾಗೂ ಸುತ್ತಮುತ್ತಲಿನ ಸಮಸ್ತ ಗ್ರಾಮದ ಯಜಮಾನರು, ಮುಖಂಡರು, ಯುವಕ ಮಿತ್ರರು ಇವರ  ಸಂಯುಕ್ತಾಶ್ರಯದಲ್ಲಿ ನ.3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭವು ಚನ್ನಪಟ್ಟಣ ತಾಲ್ಲೂಕು ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.

ಇಲ್ಲಿ ಸರಳ ವಿವಾಹವಾಗ ಬಯಸುವ ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ 18 ವರ್ಷ ತುಂಬಿರಬೇಕು. 2ನೇ ಮದುವೆಗೆ ಅವಕಾಶವಿರುವುದಿಲ್ಲ, ವಾಸಸ್ಥಳದ ದೃಢೀಕರಣ ಪತ್ರ ನೀಡಬೇಕು, ಆಧಾರ್ ಕಾರ್ಡ್ ಕಡ್ಡಾಯ, 4 ಭಾವಚಿತ್ರ ಮತ್ತು ಶಾಲೆ ವರ್ಗಾವಣೆ ಪತ್ರ ನೀಡಬೇಕು, ವಧು-ವರರ ತಂದೆ – ತಾಯಿಗಳ ಒಪ್ಪಿಗೆ ಪತ್ರ ಸಲ್ಲಿಸಬೇಕು. ದಾಖಲಾತಿಗಳ ಜೆರಾಕ್ಸ್ ಪ್ರತಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ್ ಮೊ.7411678814, 9686840493 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!