Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನವೋದಯ ಪರೀಕ್ಷೆಗೆ ಉಚಿತ ತರಬೇತಿ : ಸದುಪಯೋಗಕ್ಕೆ ಮನವಿ

ರಾಜ್ಯದಲ್ಲಿ ಶಿಕ್ಷಣ ಮಟ್ಟ ವೃದ್ಧಿಗಾಗಿ ಮಕ್ಕಳು ನವೋದಯ ಪರೀಕ್ಷೆ ಬರೆಯುವಂತಾಗಲು ಆನ್‌ಲೈನ್ ತರಗತಿ ಹಾಗೂ ಯೂಟ್ಯೂಬ್‌ನಲ್ಲಿ ತರಗತಿ ವಿಡಿಯೋ ಮೂಲಕ ಉಚಿತ ತರಬೇತಿಯನ್ನು ಪ್ರೊ.ಸಂತೋಷ್ ಒದಗಿಸುತ್ತಿದ್ದು, ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ಮನವಿ ಮಾಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ಮಟ್ಟ ಕುಸಿದಿದ್ದು, ಮಕ್ಕಳಿಗೆ ಮೌಲ್ಯವುಳ್ಳ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಂಘದ ಯುವ ಘಟಕ ಅಧ್ಯಕ್ಷ ಪ್ರೊ.ಸಂತೋಷ್ ಉಚಿತ ತರಬೇತಿ ನೀಡಲು ಮುಂದಾಗಿದ್ದಾರೆ ಎಂದರು.

ರಾಜ್ಯದ ಶಿಕ್ಷಣ ಮಟ್ಟ ಸುಧಾರಿಸದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಪ ಫಲಿತಾಂಶ ನಿರೀಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯದಲ್ಲಿ ಐದನೇ ತರಗತಿ ಓದುವ ಮಕ್ಕಳು ತಪ್ಪದೇ ನವೋದಯ ಪರೀಕ್ಷೆ ಬರೆವಂತೆ ಮಾಡಲು ಪೋಷಕರು ಗಮನ ಹರಿಸಬೇಕಿದೆ ಎಂದು ಹೇಳಿದರು.

ಸಂಘದ ಯುವ ಘಟಕ ಅಧ್ಯಕ್ಷ ಪ್ರೊ.ಸಂತೋಷ್ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದ್ದು, ಕಲಿಕೆ ಸಂಬಂಧ ಪ್ರೀ ಸ್ಕೂಲ್‌ನಿಂದ ಎಸ್‌ಎಸ್‌ಎಲ್‌ಸಿ ಹಾಗೂ ಸಿಬಿಎಸ್ಸಿ ಪಠ್ಯಕ್ರಮಗಳನ್ನು ಸಿದ್ದಪಡಿಸಿ ಆನ್‌ಲೈನ್‌ನಲ್ಲಿ ಪಾಠ ಮಾಡಲು ಸಿದ್ದನಿದ್ದೇನೆ ಎಂದು ತಿಳಿಸಿದರು.

ನವೋದಯ ಪರೀಕ್ಷೆ ಸಂಬಂಧ ಪಠ್ಯಕ್ರಮವನ್ನು ಯೂಟ್ಯೂಬ್‌ನಲ್ಲಿ ಪಾಠದ ವೀಡಿಯೋಗಳನ್ನು ಹಾಕಲಾಗಿದೆ. ಅಲ್ಲದೇ ಸಂಬಂಧ ಪಟ್ಟ ಪಠ್ಯ ಪುಸ್ತಕವನ್ನು ಉಚಿತವಾಗಿ ಪಡೆಯಲು ೮೧೦೫೩೪೮೨೯೦ ಸಂಖ್ಯೆಗೆ ವಾಟ್ಸಾಪ್ ಮೂಲಕ ಮೇಸೆಜ್ ಮಾಡಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ಸುರೇಶ್, ಮುಖಂಡ ಕುಮಾರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ