Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

ಕಬ್ಬಿಗೆ 4500 ರೂ. ಬೆಲೆ ನಿಗದಿ ಸೇರಿದಂತೆ ಪ್ರತಿ ಲೀಟರ್ ಹಾಲಿಗೆ 40 ರೂಪಾಯಿ ನಿಗದಿಪಡಿಸುವಂತೆ ಒತ್ತಾಯಿಸಿ ಕಳದ 9 ದಿನಗಳಿಂದ ರೈತರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ನ.16ರಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಮುತ್ತಿಗೆ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ರೈತರು, ಹಾಲು ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಎತ್ತಿನಗಾಡಿಗಳು, ಟ್ರಾಕ್ಟರ್ ಗಳು, ಕೃಷಿ ಪರಿಕರಗಳು ಹಾಗೂ ಜಾನುವಾರುಗಳೊಂದಿಗೆ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸುವಂತೆ ರೈತಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಧುಚಂದನ್ ಮನವಿ ಮಾಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!