Friday, September 20, 2024

ಪ್ರಾಯೋಗಿಕ ಆವೃತ್ತಿ

ಸಚಿವರಿಂದ ಮಕ್ಕಳ ಆರೋಗ್ಯ ವಿಚಾರಣೆ

ಮಧ್ಯಾಹ್ನದ ಬಿಸಿಯೂಟಕ್ಕೆ ಹಲ್ಲಿ ಬಿದ್ದಿದ್ದರಿಂದ ಅಸ್ವಸ್ಥಗೊಂಡು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಆರೋಗ್ಯವನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ವಿಚಾರಿಸಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮಿಮ್ಸ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಮಿಮ್ಸ್ ನಿರ್ದೇಶಕ ಮಹೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!