Sunday, May 19, 2024

ಪ್ರಾಯೋಗಿಕ ಆವೃತ್ತಿ

ನಾಳೆಯಿಂದ KSRTC ನೌಕರರ ಮುಷ್ಕರ : ಬಸ್ ಸಿಗಲ್ಲ…ಸಾರಿಗೆ ಸೇವೆ ಬಂದ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ನೌಕರರು ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ಸಾರಿಗೆ ಸೇವೆ ಸಂಪೂರ್ಣ ಬಂದ್ ಆಗಲಿದೆ.

ನಾಳೆಯಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದ್ರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

 ಬೇಡಿಕೆಗಳೇನು?

ಸರ್ಕಾರಿ ನೌಕರರ ಸರಿಸಮಾನಾದ ವೇತನ ನೀಡಬೇಕು

ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಎಲೆಕ್ಷನ್ ಮಾಡಬೇಕು

ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು

ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು

ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!