Saturday, November 21, 2026

ಪ್ರಾಯೋಗಿಕ ಆವೃತ್ತಿ

ಮುಳಬಾಗಿಲು | ಬೈಕ್ ಓವರ್ ಟೇಕ್ ಮಾಡಿದ್ದಕ್ಕೆ ಥಳಿತ : ಅವಮಾನಕ್ಕೀಡಾಗಿ ಅತ್ಮಹತ್ಯೆ ಮಾಡಿಕೊಂಡ ದಲಿತ ಯುವಕ

ರಸ್ತೆಯಲ್ಲಿ ಚಲಿಸುವಾಗ ಬೈಕ್ ಓವರ್ ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನಕ್ಕೀಡಾಗಿದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ