Friday, September 20, 2024

ಪ್ರಾಯೋಗಿಕ ಆವೃತ್ತಿ

ಕೋವಿಡ್ ಅಕ್ರಮದ ವಿಚಾರಣಾ ಆಯೋಗದ ಅವಧಿ ಮತ್ತೇ ವಿಸ್ತರಣೆ

ಕೋವಿಡ್​​-19 ಅಕ್ರಮದ ವಿಚಾರಣಾ ಆಯೋಗದ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್​ ನಿವೃತ್ತ ನ್ಯಾಯಾಧೀಶರಾದ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ತನಿಖಾ ಆಯೋಗದ ಅವಧಿಯನ್ನು 25-05-2024 ರಿಂದ 31-08-2024 ರವರೆಗೆ ಮೂರು ತಿಂಗಳು ವಿಸ್ತರಿಸಿ ಸರ್ಕಾರದ ಆದೇಶಿಸಿದೆ. 25-08-2023 ಏಕ ಸದಸ್ಯ‌ ತನಿಖಾ ಆಯೋಗ ರಚಿಸಿದ್ದ ಸರ್ಕಾರ ಅದರ ಅವಧಿಯನ್ನು 22-11-2023 ಮೊದಲ ಬಾರಿ ವಿಸ್ತರಣೆ ಮಾಡಿತ್ತು. 24-08-2024 ರಂದು ಎರಡನೇ ಬಾರಿ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ-ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಿತ್ತು.

ವಿಚಾರಣಾ ಆಯೋಗದ ಅವಧಿಯು 24-05-2024ಕ್ಕೆ ಕೊನೆಗೊಳ್ಳಲಿರುವುದರಿಂದ, 25-05-2024 ರಿಂದ 31-08-2024 ರವರೆಗೆ ವಿಚಾರಣಾ ಆಯೋಗವನ್ನು ವಿಸ್ತರಿಸಲು ಕೋರಿದ್ದರು. ಅದರಂತೆ ಇದೀಗ ಮೂರನೇ ಬಾರಿ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!