ಯುಗಾದಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯಾದ್ಯಂತ ಇಸ್ಪೀಟು ಸೇರಿದಂತೆ ಇತರೆ ಅಕ್ರಮ ಜೂಜಾಟ ಮತ್ತು ಬೆಟ್ಟಿಂಗ್ ನಡೆಸುವುದನ್ನು ನಿಷೇಧಿಸಲಾಗಿದ್ದು, ಅಂತಹ ಘಟನೆಗಳು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದ್ದಾರೆ.
ಯುಗಾದಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ಜೂಜಾಡುವುದು & ಇಸ್ಪೀಟ್ ಆಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು.ಹಬ್ಬದ ಸಂದರ್ಭದಲ್ಲಿ ಜೂಜಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು. #MandyaDistritPolice #Gambling pic.twitter.com/hcgo2UAAZl
— SP Mandya (@MandyaPolice) March 28, 2025
“>
ಇಸ್ಪೀಟ್ ಜತೆಗೆ ಜೂಜಾಟ ಆಡಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




