Saturday, September 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.2 ರಂದು ಗಾಂಧೀಜಿ -ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಮಂಡ್ಯ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರೂ ಯುವ ಕೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗವಿರುವ ಉದ್ಯಾನವನದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಕ್ಟೋಬರ್ 2 ರಂದು ಬೆಳಿಗ್ಗೆ 9.30 ಕ್ಕೆ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರೆವೇರಬೇಕು. ವಿವಿಧ ಧರ್ಮಗಳ ಗುರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಬೇಕು, ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪುಸ್ತಕ ವಿತರಣೆ

ಕಾರ್ಯಕ್ರಮದಲ್ಲಿ ಭಾಗವಹಿಸುವ ಅಧಿಕಾರಿಗಳು, ಗಣ್ಯರು ಹಾಗೂ ಮಕ್ಕಳಿಗೆ ಮಹಾತ್ಮ ಗಾಂಧೀಜಿಯವರ ಜೀವನದ ಬಗ್ಗೆ ತಿಳಿದು ಕೊಳ್ಳಲು ಹಾಗೂ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗುವಂತೆ ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆಯ ಬಗ್ಗೆ ವಿವಿಧ ಪುಸ್ತಕಗಳನ್ನು ವಿತಾರಣೆ ಮಾಡುವಂತೆ ತಿಳಿಸಿದರು.

ಸಸಿ ವಿತರಣೆ

ತೋಟಗಾರಿಕೆ ಇಲಾಖೆ ವತಿಯಿಂದ ಸಿಬ್ಬೆ, ನಿಂಬೆ, ತೆಂಗಿನ ಸಸಿಗಳನ್ನು ಗಣ್ಯರಿಗೆ ಹಾಗೂ ಭಜನೆಯನ್ನು ಸಾದರ ಪಡಿಸುವ ಮಕ್ಕಳಿಗೆ ವಿತರಿಸುವಂತೆ ತಿಳಿಸಿದರು.

ರಕ್ತದಾನ ಶಿಬಿರ

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎನ್ನುತ್ತಾರೆ, ಗಾಂಧಿ ಜಯಂತಿ ಅಂಗವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಬೇಕು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಾಹಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿ ಕುರಿತು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ
ಎಸ್ ಎಚ್ ನಿರ್ಮಲ ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ ಚೆಲುವಯ್ಯ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪ ಶ್ರೀ, ನೆಹರು ಯುವ ಕೇಂದ್ರದ ಮುಖ್ಯ ಲೆಕ್ಕಾಧಿಕಾರಿ ರವಿಚಂದ್ರನ್, ಮಂಡ್ಯ ನಗರಸಭೆಯ ಪರಿಸರ ಅಭಿಯಂತರ ರುದ್ರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ ವಿ ನಂದೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಯಪ್ರಕಾಶ್ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!