Thursday, September 19, 2024

ಪ್ರಾಯೋಗಿಕ ಆವೃತ್ತಿ

ಗಾಂಧಿ ಜಯಂತಿ: ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಡದಪುರ ಶಿವಣ್ಣ

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಬಿ.ಎಸ್.ಶಿವಣ್ಣ ಲ್ಯಾಪ್‌ಟಾಪ್ ವಿತರಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿರುವ 11ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಡಾ. ರಾಮ ಮನೋಹರ ಲೋಹಿಯಾ ವೇದಿಕೆಯ ವತಿಯಿಂದ ಲ್ಯಾಪ್‌ಟಾಪ್ ವಿತರಿಸಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡುವಂತೆ ಶುಭ ಕೋರಿದರು.

ವಿದ್ಯಾರ್ಥಿಗಳಾದ ಕೀರ್ತನ, ದರ್ಶನ್, ಮಣಿ, ಶಿವು, ರಾಮಚಂದ್ರ, ರಂಗನಾಥ್, ರುಖಿಯ, ಕೃತಿಕ, ಅನನ್ಯ, ಮನುಶ್ರೀ, ಕಿರಣ್ ಅವರಿಗೆ ಲ್ಯಾಪ್‌ಟಾಪ್ ವಿತರಿಸಿದರು.

ಈ ಬಗ್ಗೆ ನುಡಿ ಕರ್ನಾಟಕ. ಕಾಮ್ ಜೊತೆ ಮಾತನಾಡಿದ ಬಿ.ಎಸ್.ಶಿವಣ್ಣ ಅವರು, ಕಳೆದ 2019 ರಿಂದ ಡಾ. ರಾಮ ಮನೋಹರ ಲೋಹಿಯಾ ವೇದಿಕೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಲ್ಯಾಪ್‌ಟಾಪ್ ವಿತರಿಸುತ್ತಾ ಬಂದಿದ್ದೇನೆ.ಈಗಾಗಲೇ ಹಲವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿದ್ದೇನೆ. ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ಉದ್ದೇಶದಿಂದ ನಮ್ಮ ವೇದಿಕೆ ಇಂತಹ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ‌ ಎಂದರು.

ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ವೇದಿಕೆ ವತಯಿಂದ ಆರ್ಥಿಕ ಸಹಾಯವನ್ನು ಮಾಡಲಾಗಿದೆ‌.ಪ್ರತಿಭಾವಂತ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಪಡೆದು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಅಂಕಗಳನ್ನು ಗಳಿಸಿ ಅವರ ಪೋಷಕರಿಗೆ ಕೀರ್ತಿ ತರಬೇಕೆಂಬುದು ನಮ್ಮ ವೇದಿಕೆಯ ಉದ್ದೇಶ ಎಂದರು.

ಡಾ.ರಾಮ ಮನೋಹರ ಲೋಹಿಯಾ ವೇದಿಕೆಯ ಅಧ್ಯಕ್ಷ ಬಿ.ಎಸ್‌.ಶಿವಣ್ಣ ಅವರು ತಮ್ಮ ವೇದಿಕೆಯ ವತಿಯಿಂದ ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುವ ಮಾಹಿತಿ ತಿಳಿದಿತ್ತು.ಅವರು ನಮ್ಮನ್ನು ಗುರುತಿಸಿ ಲ್ಯಾಪ್‌ಟಾಪ್ ನೀಡಿರುವುದು ನಮ್ಮ ವಿದ್ಯಾಭ್ಯಾಸಕ್ಕೆ ನೆರವಾಗಲಿದೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!