Thursday, November 19, 2026

ಪ್ರಾಯೋಗಿಕ ಆವೃತ್ತಿ

ಗಾಂಧಿ – ಅಂಬೇಡ್ಕರ್ ಆದರ್ಶಗಳನ್ನು ಯುವ ಪೀಳಿಕೆ ಪಾಲಿಸಬೇಕಿದೆ : ಪ್ರೊ.ಜಯಪ್ರಕಾಶಗೌಡ

ಮಹಾತ್ಮ ಗಾಂಧೀಜಿಯವರು ದೇಶದ ಸ್ವತಂತ್ರಕ್ಕಾಗಿ ಹೋರಾಡಿದರೆ ಡಾ.ಬಿ. ಆರ್ ಅಂಬೇಡ್ಕರ್ ಅವರು ದೇಶದ ಸಮಾನತೆಗಾಗಿ ಹೋರಾಡಿದ್ದಾರೆ. ಅವರ ಚಿಂತನೆ ನಿಲುವು, ಆದರ್ಶವನ್ನು ಇಂದಿನ ಯುವ ಪೀಳಿಗೆಗಳು ಪಾಲಿಸಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ.ಜಯಪ್ರಕಾಶಗೌಡ ಅವರು ಹೇಳಿದರು.

ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಗಾಂಧಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗಾಂಧಿ ವಿಚಾರಧಾರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿಯವರ ಆಶಯದಂತೆ ಇಂದು ಹೆಣ್ಣು ಮಕ್ಕಳು ಸ್ವತಂತ್ರ ಮತ್ತು ಸಮಾನತೆಯಿಂದ ಬದುಕುತ್ತಿದ್ದಾರೆ. ಗಂಡು ಮಕ್ಕಳನ್ನು ಮೀರಿ ಎಲ್ಲಾ ಕ್ಷೇತ್ರದಲ್ಲೂ ಮುಂದುವರೆಯುತ್ತಿದ್ದಾರೆ. ಪ್ರಸ್ತುತ ಮಹಿಳೆಯರು ಪ್ರವೇಶ ಮಾಡದೇ ಇರುವ ಕ್ಷೇತ್ರವಿಲ್ಲ, ಭಾರತದ ಯಶಸ್ಸಿಗೆ ಹಾಗೂ ಬದಲಾವಣೆಗಳಿಗೆ ಹೆಣ್ಣುಮಕ್ಕಳ ಸಮಾನತೆ ಕಾರಣವಾಗಿದೆ ಎಂದರೆ ತಪ್ಪಾಗುವುದಿಲ್ಲ ಎಂದರು.

ಗಾಂಧಿಯವರು ತಿಳಿಸದ ವಿಷಯವಿಲ್ಲ ಸ್ವಚ್ಛತೆ, ಶ್ರಮ, ಕೃಷಿ, ಆಹಾರ, ಆರೋಗ್ಯ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಗಾಂಧೀಜಿಯವರು ಸರಳತೆಯ ಜೀವನಕ್ಕೆ ಪ್ರಮುಖವಾದ ಉದಾಹರಣೆಯಾಗಿದ್ದಾರೆ. ಸರಳತೆಯೇ ಜಗತ್ತಿನ ಸಾರ ಎಂದ ಅವರು ಶಸಸ್ತ್ರ ಹಿಡಿಯದೆ, ರಕ್ತ ಪಾತವಿಲ್ಲಿದೆ, ದೇಶಕ್ಕೆ ಸ್ವತಂತ್ರ ತಂದು ಕೊಟ್ಟಿದ್ದಾರೆ. ವಿಶ್ವದಲ್ಲಿಯೇ ಶಾಂತಿ, ಸೌಹಾರ್ದತೆಯಿಂದ ದೇಶಕ್ಕೆ ಸ್ವತಂತ್ರ ತಂದ ನಿದರ್ಶನ ಗಾಂಧಿಯವರದ್ದು ಮಾತ್ರ ಎಂದು ಬಣ್ಣಿಸಿದರು.

ಶಿಕ್ಷಣವೆಂಬುದು ಕೇವಲ ಉದ್ಯೋಗಕ್ಕಾಗಿ ಸೀಮಿತವಾಗಿರುವುದಲ್ಲ ಶಿಕ್ಷಣದಿಂದ ಅರಿವು, ಜ್ಞಾನ, ಜೀವನದ ಮೌಲ್ಯ ಎಲ್ಲವೂ ತಿಳಿಯಲು ಸಾಧ್ಯ. ವಿದ್ಯಾರ್ಥಿಗಳಾದ ನೀವು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು, ಪ್ರಶ್ನಿಸುವುದರ ಜತೆಗೆ ಕೇಳಿಸಿಕೊಳ್ಳುವ ಆಸಕ್ತಿಯನ್ನು ಸಹ ಮೈಗೂಡಿಸಿಕೊಳ್ಳಬೇಕು. ವಿಷಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಂಡಾಗ ಮಾತ್ರ ವಿಷಯದ ಆಳವಾಗಿ ಮಾಹಿತಿ ಅರ್ಥೈಸಿಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

ಮಂಡ್ಯ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಕೆ.ಶಿವಚಿತ್ತಪ್ಪ ಅವರು ಮಾತನಾಡಿ ಗಾಂಧೀಜಿಯವರು ಅಂದಿಗೂ ಇಂದಿಗೂ ಎಂದೆದಿಗೂ ಎಲ್ಲರಿಗೂ ಅನ್ವಯವಾಗುವಂತವರು ಆಗಾಗಿ ಗಾಂಧಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಆರ್ಥಿಕತೆಯ ಚಿಂತಕನಾಗಿ ದೇಶದಲ್ಲಿ ಬಡತನ ನಿವಾರಣೆಯಾಗಬೇಕು ಹಾಗೂ ದೇಶ ಸುಸ್ತಿರತೆ ಕಾಣಬೇಕು ಎಂಬುದು ಅವರ ಆಶಯವಾಗಿತ್ತು ಎಂದರು.

ಮಹಿಳೆಯರು ಭೌತಿಕ, ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಸಬಲೀಕರ ಹೊಂದಬೇಕು ಎಂದು ಗಾಂಧಿಯವರು ಮೊದಲಿಗೆ ಹೇಳಿದ್ದರು. ಈ ನಿಟ್ಟಿನಲ್ಲಿ ಮಹಿಳೆಯರು ಪುರುಷರಿಗಿಂತಲೂ ಹೆಚ್ಚಾಗಿ ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಅಲ್ಲದೆ ತಂತ್ರಜ್ಞಾನದಲ್ಲೂ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಗಾಂಧೀಜಿ ಚಿಂತನೆಗಳ ಪ್ರಸ್ತುತತೆ ಕುರಿತು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನಿರ್ದೇಶಕರಾದ ಜಿ.ಬಿ.ಶಿವರಾಜು ಹಾಗೂ ರಾಜ್ಯ ಸಂಪನ್ಮೂಲ ಕೇಂದ್ರ ನಿವೃತ್ತ ನಿರ್ದೇಶಕರಾದ ಎಸ್.ತುಕಾರಾಂ ಅವರು ಉಪನ್ಯಾಸ ಮಾಡಿದರು.

ಇದೇ ಸಂದರ್ಭದಲ್ಲಿ ಗಾಂಧಿ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಸುಮಾರಾಣಿ ಶಂಭು, ಉಪ ಕುಲ ಸಚಿವರಾದ ಡಾ. ಎಂ. ವೈ ಶಿವರಾಮು, ಮೌಲ್ಯಮಾಪನ ಕುಲಸಚಿವರಾದ ಜಿ. ವಿ ವೆಂಕಟರಮಣ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಜಿ. ವಿ ಪ್ರೇಮ್ ಸಿಂಗ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ