Tuesday, November 24, 2026

ಪ್ರಾಯೋಗಿಕ ಆವೃತ್ತಿ

ಗಾಂಧೀಜಿ-ಶಾಸ್ತ್ರೀಜಿ ಜಯಂತಿ ಅಂಗವಾಗಿ ಫುಡ್ ಕಿಟ್- ಹಣ್ಣು ಹಂಪಲು ವಿತರಣೆ

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಅಂಗವಾಗಿ ಬಡಜನರಿಗೆ ರೇಷನ್ ಕಿಟ್ ಹಾಗೂ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು- ಹಂಪಲು ವಿತರಿಸಲಾಯಿತು.

ತಹಶೀಲ್ದಾರ್ ಎಂ.ವಿ.ರೂಪ, ಪುರಸಭೆ ಅಧ್ಯಕ್ಷೆ ಮಹಾದೇವಿ ಹಾಗೂ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್ ಅವರ ನೇತೃತ್ವದಲ್ಲಿ ಮಹಾನ್ ಚೇತನಗಳಾದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಒಳರೋಗಿಗಳಿಗೆ ಹಣ್ಣುಹಂಪಲು ಹಾಗೂ ಬ್ರೆಡ್ ವಿತರಿಸಲಾಯಿತು.

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರಿಂದ ಸಂಗ್ರಹಿಸಿದ ಹಣದಿಂದ ಖರೀದಿಸಿದ 50 ಕ್ಕೂ ಹೆಚ್ಚಿನ ದಿನಬಳಕೆಯ ವಸ್ತುಗಳ ಆಹಾರ ಧಾನ್ಯಗಳ ಕಿಟ್ ಅನ್ನು ತಹಶೀಲ್ದಾರ್ ರೂಪ, ಪುರಸಭೆ ಅಧ್ಯಕ್ಷೆ ಮಹಾದೇವಿ ಹಾಗೂ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್ ವಿತರಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಕುಮಾರ್, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ತಜ್ಞ ವೈದ್ಯರಾದ ಡಾ.ಶಶಿಧರ್, ಡಾ.ಪ್ರಿಯಾಂಕಾ, ಡಾ.ಜಯಪ್ರಕಾಶ್, ಆಸ್ಪತ್ರೆಯ ಹಿರಿಯ ಶುಷ್ರೂಶಕಿ ಸೀತಮ್ಮ, ಫಾರ್ಮಸಿ ಅಧಿಕಾರಿ ಸತೀಶ್ ಬಾಬು ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ