Thursday, September 19, 2024

ಪ್ರಾಯೋಗಿಕ ಆವೃತ್ತಿ

ಹರಿಯಾಣದಲ್ಲಿ ಹೀನ ಕೃತ್ಯ| ಕುಟುಂಬಸ್ಥರ ಎದುರೇ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಹರಿಯಾಣದ ಪಾಣಿಪತ್‌ನಲ್ಲಿ ಕುಟುಂಬ ಸದಸ್ಯರ ಎದುರಲ್ಲೇ ಮೂವರು ಮಹಿಳೆಯರ ಮೇಲೆ ನಾಲ್ವರು ಮುಸುಕುಧಾರಿಗಳ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಬುಧವಾರ ನಡುರಾತ್ರಿ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ಆರೋಪಿಗಳು ಚಾಕು ಮತ್ತು ಇತರ ಹರಿತವಾದ ಅಯುಧಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮನೆಗೆ ನುಗಿದ್ದ ಮುಷ್ಕರ್ಮಿಗಳು ಕುಟುಂಬದ ಇತರ ಸದಸ್ಯರನ್ನು ಕಟ್ಟಿ ಹಾಕಿ, 24, 25 ಮತ್ತು 35 ವರ್ಷ ವಯಸ್ಸಿನ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ತಿಳಿಸಿದ್ದಾರೆ.

ಈ ಘಟನೆ ನಡೆದ ಸ್ಥಳದಿಂದ ತಪ್ಪಿಸಿಕೊಂಡು  ಹೋಗುವಾಗ ಒಂದು ಕಿ.ಮೀಟರ್ ದೂರದಲ್ಲಿ ಅಸ್ಪಶ್ಯ ಮಹಿಳೆ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಅರೋಪಿಗಳು ಪರಾರಿಯಾಗಿದ್ದಾರೆ.

ಸುಮಾರು ಒಂದು ತಿಂಗಳ ಹಿಂದೆ ಈ ಕುಟುಂಬಕ್ಕೆ ತಮ್ಮ ನಿವೇಶನಗಳನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದ ವ್ಯಕ್ತಿಗಳ ಗುಂಪೇ ಈ ಕೃತ್ಯ ಎಸಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

”ಎಲ್ಲರೂ ಮಲಗಿದ್ದಾಗ, ದುಷ್ಕರ್ಮಿಗಳು ತಮ್ಮ ಗಂಡ ಮತ್ತು ಮಕ್ಕಳನ್ನು ಹೊರಗೆ ಕರೆದೊಯ್ದು ಹಗ್ಗದಿಂದ ಕಟ್ಟಿ, ನಂತರ ಮೂವರು ಮಹಿಳೆಯರ ಮೇಲೆ ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ” ಎಂದು ಮಹಿಳೆಯರು ಆರೋಪಿಸಿದ್ದಾರೆ.

”ಆಗ ಗ್ಯಾಂಗ್ ಅವರನ್ನು ಕೊಠಡಿಯೊಂದರಲ್ಲಿ ಲಾಕ್ ಮಾಡಿದೆ. ನಂತರ, ಅವರು ನಮ್ಮನ್ನು (ಮಹಿಳೆಯರನ್ನು) ವರಾಂಡಾಕ್ಕೆ ಎಳೆದುಕೊಂಡು ಸರದಿಯಲ್ಲಿ ಅತ್ಯಾಚಾರ ಮಾಡಿದರು. ದನಿ ಎತ್ತದಂತೆ ಬೆದರಿಸಿ ಬೆಳಗಿನ ಜಾವ 4 ಗಂಟೆಯವರೆಗೂ ಚಿತ್ರಹಿಂಸೆ ನೀಡುತ್ತಿದ್ದರು. ಆನಂತರ ನಗದು ಮತ್ತು ಬೆಳ್ಳಿ ಆಭರಣದೊಂದಿಗೆ ಪರಾರಿಯಾಗಿದ್ದಾರೆ” ಎಂದು ಸಂತ್ರಸ್ತರೊಬ್ಬರು ಪೊಲೀಸರಿಗೆ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!