‘ಉತ್ತರ ಪ್ರದೇಶದಲ್ಲಿ ಶೇ. 12 ರಷ್ಟು ರೋಗಗಳಿಗೆ ಕಲುಷಿತ ಗಂಗಾ ನದಿ ನೀರು ಕಾರಣವೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗಂಗಾ ನದಿ ಅತ್ಯಂತ ಕಲುಷಿತವಾಗಿದೆ ಎಂದಿರುವ ಅವರು, ಕಲುಷಿತ ನೀರಿನಲ್ಲೇ ಭಕ್ತರು ಸ್ನಾನ ಮಾಡುತ್ತಿರುವ ವಿಡಿಯೋ ಶೇರ್ ಮಾಡಿದ್ದಾರೆ. ‘ಇದು ನಾವು ಗಂಗೆಯನ್ನು ಹೇಗೆ ನಡೆಸಿಕೊಳ್ಳುತ್ತಿದ್ದೇವೆ ಎಂಬುದರ ವಾಸ್ತವ. “ನಮಾಮಿ ಗಂಗೆ” ಎಂಬುದು ಕೇವಲ ಬಜೆಟ್ ಹಂಚಿಕೆಗಳಿಗೇ ಸೀಮಿತವಾಗಿದೆ. ಕುಂಭಮೇಳವು ಚುನಾವಣಾ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ.
This is the reality of how we are treating Maa Ganga.
“Namami Gange” is more about budget allocations, while the Kumbh serves as an electoral tool.
A study conducted a few years ago revealed that polluted Ganges water is responsible for 12% of diseases in Uttar Pradesh.
The… pic.twitter.com/k6twOZXcAD
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 9, 2025
“>
ಅಂತೆಯೇ, ‘ಕೆಲವು ವರ್ಷಗಳ ಹಿಂದೆ ನಡೆಸಿದ ಅಧ್ಯಯನವು ಉತ್ತರ ಪ್ರದೇಶದಲ್ಲಿನ ಶೇ.12%ರಷ್ಟು ರೋಗಗಳಿಗೆ ಕಲುಷಿತ ಗಂಗಾನದಿ ನೀರು ಕಾರಣವಾಗಿದೆ ಎಂದು ಬಹಿರಂಗಪಡಿಸಿದೆ. ಗಂಗಾ ಜಲಾನಯನ ಪ್ರದೇಶವು 11 ರಾಜ್ಯಗಳನ್ನು ವ್ಯಾಪಿಸಿದ್ದು, ಭಾರತದ ಭೂಪ್ರದೇಶದ ಕಾಲು ಭಾಗವನ್ನು ಒಳಗೊಂಡಿದೆ. ಇದು ಭಾರತದ ಬಡ ಸಮುದಾಯಗಳಲ್ಲಿ ಮೂರನೇ ಎರಡರಷ್ಟು ಸೇರಿದಂತೆ ದೇಶದ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರಿಗೆ ಬೆಂಬಲ ನೀಡುತ್ತದೆ.
ಹೆಚ್ಚುವರಿಯಾಗಿ, ಇದು ಭಾರತದ ಮೇಲ್ಮೈ ನೀರಿನ 1/3 ಕ್ಕಿಂತ ಹೆಚ್ಚು ನೀರು ಪೂರೈಸುತ್ತದೆ ಮತ್ತು ದೇಶದ ಅತಿದೊಡ್ಡ ನೀರಾವರಿ ಪ್ರದೇಶವನ್ನು ಒಳಗೊಂಡಿದೆ. ಆದಾಗ್ಯೂ ಈ ರೀತಿಯಾಗಿ ನಾವು ನಮ್ಮ ಜೀವಸೆಲೆಯನ್ನು ರಕ್ಷಿಸುತ್ತಿದ್ದೇವೆ’ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.




