ಶ್ರೀರಂಗಪಟ್ಟಣ ಟೌನ್ ಪೊಲೀಸರ ಕಾರ್ಯಾಚರಣೆ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ ಮನೆಯ ಮುಂದೆ ಗಾಂಜಾ ಗಿಡ ಬೆಳೆದಿದ್ದ ಸುರೇಶ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ಮನೆ ಮುಂದೆಯೇ 5 ಗಾಂಜಾ ಗಿಡ ಬೆಳೆದು, ಯಾರಿಗೂ ಕಾಣದಂತೆ ಸುತ್ತಲೂ ಸೀರೆ ಕಟ್ಟಿ ಮರೆಮಾಚಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ 3 ಲಕ್ಷ ಬೆಲೆಬಾಳುವ 10 ಕೆ.ಜಿ 100 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯ ವಿರುದ್ದ NDPS ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.




