Monday, May 20, 2024

ಪ್ರಾಯೋಗಿಕ ಆವೃತ್ತಿ

ಗ್ಯಾಸ್ ಬೆಲೆ ₹ 50 ಹೆಚ್ಚಳ : ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆಗೆ ಶಾಸಕರ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಗೃಹಬಳಕೆ ವಸ್ತುಗಳು ಸೇರಿದಂತೆ ಎಲ್‌ಪಿಜಿ ಗ್ಯಾಸ್ ಬೆಲೆಯನ್ನು ದಿನದಿಂದ ದಿನಕ್ಕೆ ಬೆಲೆ ಏರಿಕೆ ಮಾಡುವುದರ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದ್ದಾರೆ, ಇಂದು ಕೂಡ ಸಿಲಿಂಡರ್ ಬೆಲೆಯನ್ನು 50ರೂ ಹೆಚ್ಚಳ ಮಾಡಿದೆ, ಬಿಜೆಪಿ ಸರ್ಕಾರವನ್ನು ತೊಳಗಿಸಿ ಕಾಂಗ್ರೆಸ್ ಸರ್ಕಾರವನ್ನು ಕೈಹಿಡಿಯಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದರೇ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಮನೆಯ ಕುಟುಂಬದ ಮಹಿಳೆಗೆ 2 ಸಾವಿರ ರೂಗಳನ್ನು ಕೊಡಲಾಗುವುದು, ಬಡವರು, ಕಾರ್ಮಿಕರು ಕೂಲಿಕಾರರಿಗೆ ಹಾಗೂ ಜನ ಸಮಾನ್ಯರಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕೆಂದು ಕರೆ ನೀಡಿದರು.

ಟಿಎಪಿಸಿಎಂಎಸ್ ನಿರ್ದೇಶಕ ಲಿಂಗರಾಜು ಮಾತನಾಡಿ, ಜನವಿರೋಧಿ ನೀತಿಯನ್ನು ಅನುಸರಿಸುವ ಬಿಜೆಪಿ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸದೇ ಸಂಕಷ್ಟಕ್ಕೆ ದೂಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿ ಕ್ಷೇತ್ರದಲ್ಲಿ ಭಷ್ಟಚಾರ ತಾಂಡವಾಡುತ್ತಿದ್ದರೂ ಸ್ಥಳೀಯ ಶಾಸಕರು ಮತ್ತು ಸಂಸದರು ಯಾವುದೇ ಕ್ರಮ ಕೈಗೊಂಡಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆಗೆ ಶಾಸಕರನ್ನು ಕಿತ್ತು ಹಾಕಬೇಕೆಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಿಲಿಂಡರ್ ಬೆಲೆ 415ರೂ ಆದ ಸಂದರ್ಭದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು ಇಂದು ಸಿಲಿಂಡರ್ ಬೆಲೆ 1180ರೂ ಹೆಚ್ಚಾಗಿದ್ದರೂ ಕೂಡ ಬಿಜೆಪಿ ನಾಯಕರು ಮೌನವಾಗಿದ್ದಾರೆ, ಪ್ರಧಾನಿ ನರೇಂದ್ರಮೋದಿ ಬಡವರು, ಕೂಲಿಕಾರರು, ಕಾರ್ಮಿಕರ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ, ಕೂಲಿ ಮಾಡುವವರನ್ನು ನಾಶಮಾಡಿ ಶ್ರೀಮಂತರ ಪರವಾಗಿ ಆಢಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರಮೋದಿ ದೇಶಕ್ಕೆ ಶಾಪವಾಗಿದ್ದಾರೆ, ಹಿಂದೂ ಮುಸ್ಲಿಂ ಮಧ್ಯೆ ಜಗಳ ತಂದಿಟ್ಟು ದೇಶವನ್ನು ಹೊಡೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ದೂರಿದರು.

ದೇಶವನ್ನು ಒಂದೂಗೂಡಿಸಬೇಕೆಂದು ರಾಷ್ಟ್ರನಾಯಕರಾದ ರಾಹುಲ್‌ಗಾಂಧಿ ಅವರು ದೇಶದಾದ್ಯಂತ  ಪಾದಯಾತ್ರೆಯ ಮೂಲಕ ಬಡವರ ಕಷ್ಟಸುಖಗಳನ್ನು ಕಣ್ಣಾರೆ ಕಂಡು ಸಮಸ್ಯೆಯನ್ನು ತಿಳಿದಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ತರಲು ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ದ್ಯಾಪೇಗೌಡ, ಜಿ,ಪಂ ಮಾಜಿ ಸದಸ್ಯ ಜಯರಾಜು, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್, ಚಿಕ್ಕಲಿಂಗಯ್ಯ, ಪ್ರಕಾಶ್, ಮಾಜಿ ಉಪಾಧ್ಯಕ್ಷ ಸಿ. ಮಾಧು, ತಿಮ್ಮರಾಜು, ಶಾಂತರಾಜು, ಕೃಷ್ಣಮೂರ್ತಿ, ಶಿವಕುಮಾರ್, ಮಹದೇವಪ್ರಸಾದ್, ಪ್ರಸಾದ್, ಸುರೇಶ್, ಚೌಡಯ್ಯ ,ಸತೀಶ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!