Thursday, September 19, 2024

ಪ್ರಾಯೋಗಿಕ ಆವೃತ್ತಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ| ಆರೋಪಿ ಗುರುತಿಸಿದ ಸಾಕ್ಷಿಗೆ ಜೀವ ಬೆದರಿಕೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದ ಆರೋಪಿ ಪರಶರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿ ವ್ಯಕ್ತಿಗೆ ವಾಗ್ಮೋರೆ ಕೆಡೆಯವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಗೌರಿ ಅವರನ್ನು ಹತ್ಯೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬನಾದ ಪರಶುರಾಮ್ ವಾಗ್ಮೋರೆಯನ್ನು ಸಾಕ್ಷಿಯೊಬ್ಬರು ಗುರುತಿಸಬೇಕಾಗಿತ್ತು. ಸಾಕ್ಷಿ ಹೇಳಿದ್ದವರ ಮನೆಗೆ ನುಗ್ಗಿ ಬೆದರಿಕೆ ಹಾಕಿದಲ್ಲದೆ, ಪೋನ್ ಮೂಲಕವೂ ಜೀವ ಬೆದರಿಕೆ ಆಕಿದ್ದಾರೆ ಎನ್ನಲಾಗಿದೆ.

ನ್ಯಾಯಾಧೀಶರಿಂದ ಮೌಖಿಕ ಎಚ್ಚರಿಕೆ
ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು, ತೆರೆದ ನ್ಯಾಯಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ್ ಆರೋಪಿಗಳನ್ನು ಎಚ್ಚರಿಸಿದರು. ಇಂತಹ ಘಟನೆಗಳು ಮರುಕಳಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಾಕೀತು ಮಾಡಿದರು.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ ಹಾಲ್ ನಂ.1 ರಲ್ಲಿ ಸೆಷನ್ ನ್ಯಾಯಾದೀಶರಾದ ರಾಮಚಂದ್ರ.ಪಿ ಹುದ್ದಾರ್ ಗೌರಿ ಲಂಕೇಶ್ ಹತ್ಯೆಯ ವಿಚಾರಣೆ ನಡೆಸಿದರು.

ಈ ತಿಂಗಳ ವಿಚಾರಣೆಯ ಕೊನೆಯ ದಿನವಾದ ಇಂದು ಪರಶುರಾಮ ವಾಗ್ಮೊರೆಯನ್ನು ಗುರುತಿಸುವ, ಮತ್ತು ಆರೋಪಿಯ ಮೇಲಿರುವ ಇತರ ಪ್ರಕರಣಗಳ ಬಗ್ಗೆ ಸಾಕ್ಷಿ ನುಡಿಯಬೇಕಾಗಿತ್ತು. ಆದರೆ ನೆನ್ನೆ ನಾಲ್ಕು ಜನರು ಆತನ ಮನೆಗೆ ನುಗ್ಗಿ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕಿದ್ದಾರೆ. ಇಂದು ಬೆಳಿಗ್ಗೆ ಕೂಡ ಎರಡು ಬಾರಿ ಫೋನ್ ಕರೆಗಳ ಮೂಲಕ ಧಮಕಿ ಹಾಕಿದ್ದಾರೆ ಎಂದು ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಬಾಲನ್ ರವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!