Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನ.4ರಂದು ಗೌತಮ ಬುದ್ಧ ಪ್ರಾರ್ಥನಾ ಕಾರ್ಯಕ್ರಮ

ಬುದ್ಧ ಭಾರತ ಫೌಂಡೇಶನ್ ವತಿಯಿಂದ ಬೆಳಕಿನ ಹಬ್ಬದ ಪ್ರಯಕ್ತ ಗೌತಮ ಬುದ್ಧರಿಗೆ 101 ಕ್ಯಾಂಡಲ್ ಹಚ್ಚುವ ಮೂಲಕ ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣ ತಾಲೂಕಿನ ನೇರಲಕೆರೆ ಗ್ರಾಮದಲ್ಲಿ  ನವೆಂಬರ್ 4ರ ಸಂಜೆ 6ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್‌ನ ಅಧ್ಯಕ್ಷ ಜೆ.ರಾಮಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು, ಮನುಕುಲಕ್ಕೆ ಪ್ರೀತಿ, ಶಾಂತಿ, ನೆಮ್ಮದಿ, ಗೌರವ ಮತ್ತು ಘನತೆಯ ಬದುಕು ಸಿಗಲಿ ಎಂದು ಭಗವಾನ್ ಬುದ್ಧರಲ್ಲಿ ಪ್ರಾರ್ಥಿಸಲಾಗುವುದು ಎಂದರು.

ಬುದ್ಧರು ತ್ರಿಸರಣ, ಪಂಚಶೀಲ, ಅಷ್ಟಾಂಗ ಮಾರ್ಗಗಳ ಮೂಲಕ ಮನಸ್ಸಿನ ಏಕಾಗ್ರತೆಗೆ ಧ್ಯಾನ ಆಚರಣೆ ಮಾಡುವ ಮೂಲಕ ಮಾನವ ಶಾಂತಿ, ನೆಮ್ಮದಿ, ಪ್ರೀತಿ, ಮಮತೆ, ಮೈತ್ರಿಯಿಂದ ಬಾಳಬಹುದೆಂದು ತಿಳಿಸಿಕೊಳ್ಳಿದ್ದು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಹಿಳೆಯರಿಂದಲೇ ಕ್ಯಾಂಡಲ್ ಹಚ್ಚುವ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಇರುವ ಬುದ್ಧ ಧಮ್ಮದ ಅನುಯಾಯಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಲೋಕೇಶ್, ವೇಣುಗೋಪಾಲ್, ಅಮ್ಜದ್ ಪಾಷಾ, ಗಂಗರಾಜು, ಸುಭಾಷ್, ಸೂರ್ಯ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ