Friday, September 20, 2024

ಪ್ರಾಯೋಗಿಕ ಆವೃತ್ತಿ

ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರಸ್ವಾಮಿ ಬ್ರಹ್ಮರಥೋತ್ಸವ

ಕೆ ಆರ್ ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಪನಹಳ್ಳಿ ಬಳಿ ಇರುವ  ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿಯವರ ಬ್ರಹ್ಮ ರಥೋತ್ಸವವು ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ ನಾರಾಯಣಗೌಡ ರಥಕ್ಕೆ  ಸಾಂಪ್ರದಾಯಿಕ ಪೂಜೆ ಸಲ್ಲಿಸಿಚಾಲನೆ  ನೀಡಿದರು. ಬಳಿಕ ಮಾತನಾಡಿದ ಅವರು, ಜಾತ್ರೆಗಳು ನಮ್ಮ ಸಂಸ್ಕೃತಿಯ ಸಂಕೇತವಾಗಿವೆ. ನಮ್ಮ ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಬ್ಬಗಳು ಹಾಗೂ ಜಾತ್ರೆಗಳನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಒಂದಲ್ಲ ಒಂದು ಪ್ರದೇಶದಲ್ಲಿ ಜಾತ್ರೆಗಳು ಹಾಗೂ ಹಬ್ಬಗಳನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಜಾತ್ರೆಗಳು ತನ್ನದೇ ಆದ ವಿಶೇಷತೆಯನ್ನು ಹೊಂದಿದೆ ಎಂದರು.

ಕ್ಷೇತ್ರದ ಪೀಠಾಧಿಪತಿ ಸ್ವತಂತ್ರ ಚೆನ್ನವೀರ ಸ್ವಾಮೀಜಿ, ಕೆಂಗೇರಿ ಬಂಡೆಮಠದ ಸಚ್ಚಿದಾನಂದ ಸ್ವಾಮೀಜಿ ಸಾನಿಧ್ಯ  ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಪನಹಳ್ಳಿ, ವಿಠಲಾಪುರ, ದೊದ್ದನಕಟ್ಟೆ, ಕಾಳೇಗೌಡನಕೊಪ್ಪಲು, ಯಡಹಳ್ಳಿ, ಮತ್ತಿಘಟ್ಟ, ನಾಟನಹಳ್ಳಿ, ಬಳ್ಳೇಕೆರೆ, ಅರಳಕುಪ್ಪೆ ಗ್ರಾಮಗಳ ಭಕ್ತರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!