Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತನ್ನಿ

ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಬೇಕೆಂದು, ಕಾಂಗ್ರೆಸ್ ನಾಯಕರು ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ ಅವರಿಗೆ ಮನವಿ ಸಲ್ಲಿಸಿದರು.

ಪಾಂಡವಪುರ ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಕಲ್ಯಾಣ ಮಂಟಪದಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಕೆಪಿಸಿಗೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಡಾ.ಹೆಚ್.ರವೀಂದ್ರ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ಅಭಿನಂದನಾ ಸಮಾರಂಭ ನಡೆಯಿತು.

ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಬೆಳೆಸಲು ರವೀಂದ್ರರು ಮುಂದಾಗಲಿ. ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮ ರೂಪಿಸಿ ಅಧಿಕಾರಕ್ಕೆ ತರಬೇಕೆಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಸಾಹಿತಿ ಚಿಕ್ಕಮರಳಿ ಬೋರೇಗೌಡ ಹಾಗೂ ಪಕ್ಷದ ಅನೇಕ ಗಣ್ಯರು, ಮುಖಂಡರು, ಕಾರ್ಯಕರ್ತರು, ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್.ರವೀಂದ್ರ ಅವರಿಗೆ ಅಭಿನಂದಿಸಿ, ಮತ್ತಷ್ಟು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿ, ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ಎಂದು ಶುಭ ಕೋರಿದರು.

ಪಾಂಡವಪುರ ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೃಷ್ಣೇಗೌಡ, ಪಕ್ಷದ ಮುಖಂಡರಾದ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಹೆಚ್.ತ್ಯಾಗರಾಜು, ಕನಗನಹಳ್ಳಿ ಪರಮೇಶ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಅಂಜನಾ ಶ್ರೀಕಾಂತ್, ಮಹಮದ್ ಅನೀಫ್, ಡಿ.ಹುಚ್ಚೇಗೌಡ, ಮೇಲುಕೋಟೆ ಬ್ಲಾಕ್ ಅಧ್ಯಕ್ಷ ಸಂಪಳ್ಳಿ ಉಮೇಶ್, ವೀಕ್ಷಕ ಕೊತ್ತತ್ತಿ ರಾಜು, ಮುರಳೀಧರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!