Saturday, May 18, 2024

ಪ್ರಾಯೋಗಿಕ ಆವೃತ್ತಿ

ಬಾಲಕಿ ಕೊಲೆ ಖಂಡಿಸಿ ಶಾಲಾ ಮಕ್ಕಳ ಪ್ರತಿಭಟನೆ

ಮಳವಳ್ಳಿ ಪಟ್ಟಣದಲ್ಲಿಂದು ಶಾಲಾ ಮಕ್ಕಳು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳಾದ ರೋಟರಿ ಶಾಲೆ, ಅನಿತಾ ಪ್ರೌಢಶಾಲೆ, ವಿದ್ಯಾ ವಿಕಾಸ್ ಶಾಲೆ ಸೇರಿದಂತೆ ಹಲವಾರು ಶಾಲಾ ವಿದ್ಯಾರ್ಥಿಗಳು, ಆಡಳಿತ ಮಂಡಳಿ ‌ಪದಾಧಿಕಾರಿಗಳು, ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಸಾವಿರಾರು ಮಕ್ಕಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಘಟನೆಯನ್ನು ಖಂಡಿಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ತಾಲ್ಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರ‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಪುಟ್ಟ ಬಾಲಕಿ ಮೇಲೆ ಪೈಶಾಚಿಕ ಕೃತ್ಯವೆಸಗಿ‌ ಕೊಲೆ ಮಾಡಿರುವ ಆರೋಪಿಗೆ ‌ಮರಣ ದಂಡನೆ ವಿಧಿಸುವ ಕುರಿತು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!