Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಕ್ಕಳಿಗೆ ದುಡಿಮೆ ಬೇಡ, ಶಿಕ್ಷಣ ನೀಡಿ: ಡಾ ಕುಮಾರ

ಮಕ್ಕಳಿಗೆ ಕಡ್ಡಾಯ ಶಿಕ್ಷಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಿ ಮಕ್ಕಳನ್ನು ದುಡಿಮೆಯಿಂದ ದೂರ ಮಾಡಿ ಕಡ್ಡಾಯವಾಗಿ ಶಿಕ್ಷಣ ದೊರಕಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಮಂಡ್ಯನಗರದ ಕರ್ನಾಟಕ ಸಂಘದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅನಕ್ಷರಸ್ಥ ಕುಟುಂಬ, ಕುಟುಂಬದ ಆರ್ಥಿಕ ಪರಿಸ್ಥಿತಿ, ಸಮಾಜಿಕ ಪರಿಸ್ಥಿತಿ ಈಗೇ ಹಲವಾರು ಕಾರಣಗಳಿಂದ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡುವುದನ್ನು ನೋಡಿದ್ದೇವೆ. ಸರ್ಕಾರ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯಲು ಹಲವಾರು ಕಾಯ್ದೆ ಹಾಗೂ ಕಾನೂನುಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಜಾರಿಗೆ ತಂದು ಬಾಲ ಕಾರ್ಮಿಕ ಪದ್ದತಿಯನ್ನು ತೊಡೆದು ಹಾಕಬೇಕೆಂದು ಸಲಹೆ ನೀಡಿದರು.

ಹಲವಾರು ಕಾರಣಗಳಿಂದ ಮಕ್ಕಳು ಕೆಲಸಕ್ಕೆ ಹೋಗುತ್ತಾರೆ ಆದರೆ ಕೆಲಸಕ್ಕೆ ಸೇರಿಸಿ ಕೊಳ್ಳುವವರು ಅಕ್ಷರಸ್ಥರು, ಆರ್ಥಿಕವಂತರು ಆಗಿದ್ದರು ಕೂಡ ಅವರಿಗೆ ಬುದ್ದಿ ಹೇಳದೆ ಕೆಲಸಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ, ಜಿಲ್ಲೆಯಲ್ಲಿ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡ ಪ್ರಕರಣಗಳಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿದೆ‌‌. ಮಕ್ಕಳನ್ನು ಕೆಲಸಕ್ಕೆ ಕಳುಹಿಸಿದರೆ ಅವರ ತಂದೆ ತಾಯಿ ಯನ್ನು ಕರೆಸಿ ಬುದ್ದಿ ಹೇಳಿ,ಮಕ್ಕಳಿಗೆ ಶಿಕ್ಷಣ ದೊರಕುವಂತೆ ಮಾಡಿ ಎಂದರು.

ಬಾಲ ಕಾರ್ಮಿಕ ರನ್ನು ಕಂಡಲ್ಲಿ ರಕ್ಷಿಸಿ

ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯುವುದು ಹಾಗೂ ಅರಿವು ಮೂಡಿಸುವುದು ಬಾಲ ಕಾರ್ಮಿಕ ವಿರೋಧಿ ದಿನಕ್ಕೆ ಮಾತ್ರ ಸೀಮಿತ ಮಾಡದೆ ಪ್ರತಿ ದಿನ ನಮ್ಮ ನಿತ್ಯ ಜೋವನದಲ್ಲಿ ಬಾಲ ಕಾರ್ಮಿಕ ರನ್ನು ಕಂಡಲ್ಲಿ ಅವರನ್ನು ರಕ್ಷಿಸಿ ಶಿಕ್ಷಣ ಎಂಬ ಮುಖ್ಯವಾಹಿನಿಗೆ ತರಬೇಕು. ಬಾಲ ಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿ ಸಮಾಜದಲ್ಲಿ ಬೆಳೆಯದಂತೆ ತಡೆಗಟ್ಟಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ಆನಂದ  ಹೇಳಿದರು.

ಬಾಲ್ಯ ಎಂಬುವುದು ಪ್ರತಿಯೊಬ್ಬರ ಜೀವನದ ಅತ್ಯಮೂಲ್ಯವಾದ ಸಮಯ. ಬಾಲ್ಯವನ್ನು ಕಸಿದುಕೊಂಡು ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಗೆ ದೂಡಿದರೆ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದ ಮೇಲೆ ದುಷ್ಪರಿಣಾಮ ಬೀರಿ ಸನಾಜದ ಅಭಿವೃದ್ಧಿ ಕುಂಠಿತವಾಗುತ್ತದೆ. ಬಾಲ್ಯದಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು. ಬಾಲ್ಯದಲ್ಲಿ ಮಕ್ಕಳ ಕಲಿಕಾ ಶಕ್ತಿ ಹೆಚ್ಚಿರುತ್ತದೆ. ಅವರಿಗೆ ಉತ್ತಮ ಕೌಶಲ್ಯ, ಜ್ಞಾನ ಮತ್ತು ಶಿಕ್ಷಣ ನೀಡಿ ದೇಶದ ಮುಂದಿನ ಸದೃಢ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎಸ್ ರಾಜುಮೂರ್ತಿ, ನಿವೃತ್ತ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಕಾರ್ಮಿಕ ಕಾನೂನುಗಳ ಸಲಹೆಗಾರರಾದ ವಿಜಯ್ ದೇವ್ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!