ಅಂತರಂಗಕ್ಕೆ ಸಂಸ್ಕಾರ ನೀಡುವುದು ನಿಜವಾದ ಶಿಕ್ಷಣ ಎಂದು ಎಸ್.ಬಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ. ಮೀರಾ ಶಿವಲಿಂಗಯ್ಯ ತಿಳಿಸಿದರು.
ಮಂಡ್ಯದ ಎಸ್.ಬಿ ಸಮುದಾಯ ಭವನದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಮಾಂಡವ್ಯ ಇಂಟಿಗ್ರೇಟೆಡ್ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದಿಂದ ಮಕ್ಕಳು ಜೀವನದಲ್ಲಿ ಶಿಸ್ತನ್ನು ಕಲಿಯುತ್ತಾರೆ, ಹಾಗೇ ನೋಡಿದರೆ ಶಿಕ್ಷಣ ಬುದ್ದಿಯನ್ನು ಬಗ್ಗಿಸುವಂತದ್ದಾಗಿದೆ, ನಡೆ, ನುಡಿಯನ್ನು ತಿದ್ದುವಂತದ್ದಾಗಿದೆ. ಮಕ್ಕಳ ಮಾನವಂತರಾಗಿದ್ದು, ಗೌರವ, ಘನತೆಯಿಂದ ವರ್ತಿಸುವಂತೆ ಮಾಡುತ್ತದೆ. ವ್ಯಕ್ತಿತ್ವ ರೂಪಿಸುವುದರಲ್ಲಿ ಶಿಕ್ಷಣದ ಪಾತ್ರ ಅಪಾರವಾಗಿದೆ ಎಂದರು.
ಎಸ್.ಬಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ. ಶಿವಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಕಾರ್ಯದರ್ಶಿ ಪ್ರೊ. ಟಿ. ನಾಗೇಂದ್ರ, ಪ್ರಾಂಶುಪಾಲ ಪಿ. ಕುಮಾರ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲುದಾರರಾದ ಎಂ. ಅವಿನಾಶ್, ಡಿ.ಎಸ್. ರಾಘವೇಂದ್ರ, ಕಾಲೇಜಿನ ಪ್ರಾಂಶುಪಾಲ ಕೆ.ಕೆ. ಚಂದ್ರಶೇಖರ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಹದೇವಯ್ಯ, ಶೈಕ್ಷಣಿಕ ಪಾಲುದಾರರಾದ ಡಾ. ಎಂ.ಪಿ. ಮೋಹನ್, ಎಂ.ಎಸ್. ಅರ್ಚನಾ, ಪಿ. ಚನ್ನೇಶ್, ಬೋಧಕ ಬೋದಕೇತರ ವರ್ಗ ಹಾಗೂ ವಿದ್ಯಾರ್ಥಿ ವೃಂದದವರೆಲ್ಲರೂ ಹಾಜರಿದ್ದರು.




