Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಚಿನ್ನದಂಗಡಿ ಲೂಟಿ ಸಂದರ್ಭದಲ್ಲಿ ವೃದ್ದನ ಕೊಲೆ ; ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಚಿನ್ನದಂಡಗಿ (ಜ್ಯುವೆಲರಿ ಶಾಪ್)ಯಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆಗಸ್ಟ್ 17 ರಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯುವಲರಿ ಶಾಪ್ ನ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಶೆಟರ್ ಮುರಿದು 110 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಕಳ್ಳತನ
ಮಾಡಿದ್ದ ಐವರ ತಂಡ. ಚಿನ್ನದಂಗಡಿ ಕಳ್ಳತನ ಮಾಡುವುದನ್ನು ಕಂಡ ಹೋಟೆಲ್ ಮಾಲೀಕ ಮಾದಪ್ಪರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.

ಖಚಿತ ಮಾಹಿತಿ ಮೇರೆಗೆ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು ಭೀಮನಹಳ್ಳಿ ಗ್ರಾಮದಲ್ಲಿದ್ದ ಆರೋಪಿಗಳ
ಬಂಧಿಸಲು ಪೊಲೀಸರು ದಾಳಿ ನಡೆಸಿದಾಗ ಆರೋಪಿ ಕಿರಣ್ ಎಂಬಾತ ಪೊಲೀಸ್ ಪೇದೆ ಮೇಲೆ ಚಾಕುವಿನಿಂದ
ಹಲ್ಲೆ ಮಾಡಿದ್ದಾನೆ. ಇದೇ ವೇಳೆ ಸಿಪಿಐ ಶ್ರೀಧರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೇದೆ ನೆರವಿಗೆ ಧಾವಿಸಿದ್ದಾರೆಂದು ತಿಳಿದುಬಂದಿದೆ.

ಈಚಗೆರೆ ಕಿರಣ್ (24), ಕೊತ್ತತ್ತಿ ಗ್ರಾಮದ ಆನಂದ್, ಶರತ್, ಶ್ರೀನಿವಾಸ, ಕೃಷ್ಣಚಾರಿ ಬಂಧಿತ
ಆರೋಪಿಗಳಾಗಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಗಾಯಗೊಂಡಿರುವ ಸಿಬ್ಬಂದಿ ಹಾಗೂ ಆರೋಪಿ ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದು, ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆ ನೀಡಿರುತ್ತಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ