Thursday, November 19, 2026

ಪ್ರಾಯೋಗಿಕ ಆವೃತ್ತಿ

ಶಿವಮೊಗ್ಗ| ಅಪಘಾತದ ಗಾಯಾಳುಗಳಿಗೆ ಸಹಾಯಾಸ್ತ ನೀಡಿದ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಕಾರ್ಗಲ್ ಪೊಲೀಸ್ ಸರಹದ್ದು ಮುಪ್ಪಾನೆ ಬಳಿ ನೆಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಪ್ರವಾಸಿಗರು ಜೋಗ ಜಲಪಾತ ವಡನ್ ಬೈಲ್ ಪದ್ಮಾವತಿ ದೇವಸ್ಥಾನ ಇನ್ನಿತರ ಪ್ರವಾಸಿ ತಾಣ ನೋಡಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಸುಮಾರು 27 ಕ್ಕೂ ಹೆಚ್ಚಿನ ಪ್ರವಾಸಿಗರು ಸಾಗರ ಉಪ ವಿಭಾಗೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಮಂಗಳೂರು ಆಸ್ಪತ್ರೆಗೆ ಆಂಬುಲೆನ್ಸ್ ಮುಖಾಂತರ ರವಾನಿಸಿರುವ ಮಾಹಿತಿ ಲಭ್ಯವಾಗಿದೆ.

ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಜನಸ್ನೇಹಿ ಆಪತ್ಬಾಂದವ ಎಂದೇ ಖ್ಯಾತರಾದ ಗೋಪಾಲ ಕೃಷ್ಣ ಬೇಳೂರು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಅಲ್ಲದೇ ಸ್ವಂತ ಖರ್ಚಿನಲ್ಲಿ 20 ಕ್ಕೂ ಹೆಚ್ಚು ಖಾಸಗಿ ಆಂಬುಲೆನ್ಸ್ ಗಳಲ್ಲಿ ಮಣಿಪಾಲ ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಿದ್ದೂ ಶಾಸಕರಾದ ಗೋಪಾಲ ಕೃಷ್ಣ ಬೇಳೂರು ಹೃದಯ ವೈಶಾಲತೆಗೆ ಗಾಯಾಳುಗಳು ಕೃತಜ್ಞತೆ ಸಲ್ಲಿಸುತ್ತಿರುವುದು ಕಂಡು ಬಂದಿತು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ