Saturday, November 21, 2026

ಪ್ರಾಯೋಗಿಕ ಆವೃತ್ತಿ

35 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ : ಚಲುವರಾಯಸ್ವಾಮಿ

ಕಾರ್ಮಿಕರು ಶ್ರಮ ಜೀವಿಗಳು ಅವರಿಗೆ ಅನುಕೂಲವಾಗಬೇಕು ಹಾಗೂ ಅವರ ಮಕ್ಕಳಿಗೆ ಉದ್ಯೋಗ ದೊರೆಯಬೇಕು ಎಂದು ಅನೇಕ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆ ಜಾರಿಗೆ ತಂದಿದೆ ಮತ್ತು ಸ್ವತಃ ಇಲಾಖೆಯವರೇ ಜಿಲ್ಲೆಗಳಿಗೆ ಆಗಮಿಸಿ ಯೋಜನೆ, ಸೌಲಭ್ಯಗಳ ಅರಿವು ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮಂಡ್ಯ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ “ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ” ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎಲ್ಲಾ ವರ್ಗದಿಂದ 35 ಲಕ್ಷ ಜನ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ 101 ಅಸಂಘಟಿತ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸೌಲಭ್ಯ ನೀಡುತ್ತಿದೆ. ಸರ್ಕಾರ ರಾಜ್ಯದ ಎಲ್ಲಾ ಶ್ರಮಿಕರಿಗಾಗಿ, ಬಡವರಿಗಾಗಿ ಗ್ಯಾರಂಟಿ ಯೋಜನೆಯನ್ನು ಒಳಗೊಂಡಂತೆ ಇತರೆ ಯೋಜನೆಗಳನ್ನು ಜಾರಿಗೆ ತಂದಿರುವುದು. ಜನರ ಪರವಾಗಿ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಪ್ರೋತ್ಸಾಹಿಸಿ ಎಂದರು.

ಸರ್ಕಾರ ಕೋವಿಡ್ ನಿಂದ ಹಿಡಿದು ಇಲ್ಲಿಯವರೆಗೂ ಜನರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸಿದೆ. ಸರ್ಕಾರ ಕೇವಲ ಎಲ್ಲಾ ಸಮುದಾಯಗಳ ಪರವಾಗಿ ಇದ್ದು ಬಡವರಿಗಾಗಿ ನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಎಲ್ಲಾ ಇಲಾಖೆಗಳಿಗೂ ಜವಾಬ್ದಾರಿಗಳನ್ನು ನೀಡಿದ್ದು, ಪ್ರತಿ ಇಲಾಖೆಯೂ ಬಡವರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕ ಪಿ.ರವಿಕುಮಾರ್ ಅವರು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯ ಮಹತ್ವ ತಿಳಿದಿದ್ದು ಸಂತೋಷ್ ಲಾಡ್ ಕಾರ್ಮಿಕ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾಗ. ರಸ್ತೆ ಅಪಘಾತದಲ್ಲಿ ಸಿಲುಕಿದ ಬಡವರಿಗಾಗಿ ಹಾಗೂ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯವರು ಕಾರ್ಮಿಕರಿಗಾಗಿ ಅಪಘಾತ ವಿಮೆಯನ್ನು ಜಾರಿಗೆ ತಂದಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಜಿಲ್ಲೆಯಲ್ಲಿದ್ದ ಹಕ್ಕುಪತ್ರ ಸಮಸ್ಯೆ ಪರಿಹರಿಸಿದ್ದು ಮುಖ್ಯ ಮಂತ್ರಿಯವರ ಅನುಮತಿ ಮೇರೆಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುವುದು.  ಮನೆಯಿಲ್ಲದವರಿಗಾಗಿ ನಿವೇಶನ ನೀಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಜನರಿಗೆ ಮನೆ ನೀಡಲು ನಿವೇಶನ ಗುರುತಿಸಲಾಗಿದೆ ಮತ್ತು ನಿವೇಶನ ನೀಡಲು ಕಾರ್ಯಕ್ರಮ ಆಯೋಜಿಸಲಾಗುವುದು. ಮುಂದೆ ಮಂಡ್ಯ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಎಂ.ಉದಯ್, ಮೇಲುಕೋಟೆ ವಿಧಾನಸಭಾ ಕ್ಷೇತ್ರ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕರ್ನಾಟಕ ಸಣ್ಣಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ